ಮಡಿಕೇರಿ, ಆ. 21: ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಮತ್ತು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಸಹಯೋಗದಲ್ಲಿ ರಾಜೀವ್ ಗಾಂಧಿ ಮತ್ತು ದೇವರಾಜ್ ಅರಸ್ ಜನ್ಮದಿನಾಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾಸ್ತವಿಕವಾಗಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕ ತೆನ್ನಿರಾ ಮೈನಾ ಮಾತನಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್, ರಾಜೀವ್ ಗಾಂಧಿಯವರ ಆದರ್ಶಗಳನ್ನು ಪ್ರತಿಯೊಬ್ಬ ಭಾರತೀಯರು ಪಾಲಿಸಬೇಕೆಂದು ಕರೆ ನೀಡಿದರು. ಮುಖ್ಯ ಅತಿಥಿಯಾಗಿದ್ದ ಹಿರಿಯ ಕಾಂಗ್ರೆಸ್ ಮುಖಂಡ ಟಿ.ಪಿ. ರಮೇಶ್, ದೇವರಾಜ್ ಅರಸ್ ಮತ್ತು ರಾಜೀವ್ ಗಾಂಧಿಯವರು ನೀಡಿದ ಕೊಡುಗೆಗಳಿಂದ ಭಾರತ ಮತ್ತು ಕರ್ನಾಟಕ ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಮುಂದುವರಿದಿದೆ ಎಂದರು.
ವೇದಿಕೆಯಲ್ಲಿ ಕೆಪಿಸಿಸಿ ಹಿರಿಯ ಉಪಾಧ್ಯಕ್ಷ ಮಿಟ್ಟು ಚಂಗಪ್ಪ, ಮುಖಂಡರಾದ ನಟೇಶ್ ಗೌಡ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ರ್ರು ರವೀಂದ್ರ, ನಾಪೆÇೀಕ್ಲು ಅಧ್ಯಕ್ಷ ಇಸ್ಮಾಯಿಲ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯಾ ಅಬ್ರಾರ್, ಯುವಕಾಂಗ್ರೆಸ್ ಅಧ್ಯಕ್ಷ ಹನೀಫ್, ಡಾ. ಜಯಂತಿ ಶೆಟ್ಟಿ, ಕಿಸಾನ್ ಘಟಕದ ಅಧ್ಯಕ್ಷ ನೆರವಂಡ ಉಮೇಶ್, ಸೇವಾದಳ ಅಧ್ಯಕ್ಷ ಚಿಲ್ಲುವಂಡ ಕಾವೇರಪ್ಪ, ಸಾಮಾಜಿಕ ಜಾಲತಾಣದ ಅಧ್ಯಕ್ಷ ಹೊಸೂರು ಸೂರಜ್, ನಗರಾಧ್ಯಕ್ಷ ಅಬ್ದುಲ್ ರಜಾಕ್, ಮುಖಂಡರುಗಳು, ಕಾರ್ಯಕರ್ತರು ಇದ್ದರು.
ಕೋಡಿರ ವಿನೋದ್ ಸ್ವಾಗತಿಸಿ, ಹಿಂದುಳಿದ ಘಟಕದ ಅಧ್ಯಕ್ಷ ಜಗದೀಶ್ ವಂದಿಸಿದರು. ಸಂಘಟನೆಯ ಸಂಚಾಲಕ ಪಿ.ಎಲ್. ಸುರೇಶ್ ಸಂಪಾಜೆ ಕಾರ್ಯಕ್ರಮ ನಿರೂಪಿಸಿದರು.