ಮಡಿಕೇರಿ, ಆ. 21: ಕೆಪಿಸಿಸಿ ಆಯೋಜಿಸಿರುವ ಆರೋಗ್ಯ ಹಸ್ತ ಕಾರ್ಯಕ್ರಮದ ತರಬೇತಿ ಕಾರ್ಯಾಗಾರ ಮಡಿಕೇರಿಯ ಅಂಬೇಡ್ಕರ್ ಭವನದಲ್ಲಿ ನಡೆಯಿತು. ತರಬೇತಿ ಶಿಬಿರವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮ ಕೊಡಗಿನಲ್ಲಿ ಯಶಸ್ವಿಯಾಗಿ ನಡೆದಿದ್ದು, ಆರೋಗ್ಯ ಹಸ್ತ ಕಾರ್ಯಕ್ರಮವನ್ನು ಅತ್ಯಂತ ಯಶಸ್ಸುಗೊಳಿಸಲು ಕರೆ ನೀಡಿದರು. ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಮಾತನಾಡಿ, ಕೋವಿಡ್ ವಾರಿಯರ್ಸ್‍ಗಳು ತಮ್ಮ ವಲಯಾಧ್ಯಕ್ಷರ ನೇತೃತ್ವದಲ್ಲಿ ಪ್ರತಿ ಮನೆಗಳಲ್ಲಿ ತಪಾಸಣೆ ನಡೆಸಬೇಕೆಂದು ಹೇಳಿದರು. ವಾರಿಯರ್ಸ್‍ಗಳ ಕರ್ತವ್ಯ ನಿರ್ವಹಣೆ ಬಗ್ಗೆ ಕೆಪಿಸಿಸಿ ನಿಯೋಜಿತ ವೈದ್ಯರುಗಳಾದ ಡಾ. ವನಿತಾ, ಡಾ. ಶ್ರೀನಿವಾಸ್ ಮತ್ತು ಡಾ. ಜ್ಯೋತಿ ಮಾಹಿತಿ ನೀಡಿದರು. ಎಐಸಿಸಿ ವಕ್ತಾರ ಬ್ರಿಜೇಶ್ ಕಾಳಪ್ಪ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ರು ರವೀಂದ್ರ, ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ತೆನ್ನೀರಾ ಮೈನಾ ಇತರರು ಹಾಜರಿದ್ದರು.