ಶನಿವಾರಸಂತೆ: ಪಟ್ಟಣದ ಸೆಕ್ರೇಡ್ ಹಾರ್ಟ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಾದ ಅನನ್ಯ ಹೆಚ್. ರಾಜ್ ಶೇ. 98, ಬಿ.ಎನ್. ಲಲಿತಾ ಶೇ. 97.60, ಬಿ.ವಿ. ಅದಿತಿ ರಾವ್ ಶೇ. 97.44 ಅಂಕ ಪಡೆದು ಶಾಲೆಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನಗಳಿಸಿದ್ದಾರೆ.
*ಗೋಣಿಕೊಪ್ಪಲು: ಬಾಳೆಲೆ ವಿಜಯಲಕ್ಷ್ಮಿ ಶಾಲೆಯಲ್ಲಿ ಶೇ. 62 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಹೆಚ್.ಎಸ್. ಸುಂದರಕೃಷ್ಣ 535 ಅಂಕಗಳನ್ನುಗಳಿಸಿ ಶಾಲೆಗೆ ಪ್ರಥಮ ಸ್ಥಾನಗಳಿಸಿದ್ದಾರೆ.
ಸೋಮವಾರಪೇಟೆ: ಸೋಮವಾರಪೇಟೆಯ ಕೊಡಗರಹಳ್ಳಿ ಶಾಂತಿನಿಕೇತನ ಪ್ರೌಢಶಾಲೆ, ನೆಲ್ಲಿಹುದಿಕೇರಿ ಆಂಗ್ಲೋ ವರ್ಣಾಕುಲರ್ ಪ್ರೌಢಶಾಲೆ, ಬಸವನಹಳ್ಳಿ ಮೊರಾರ್ಜಿ ವಸತಿ ಪ್ರೌಢಶಾಲೆ, ಸೋಮವಾರಪೇಟೆ ವಿಶ್ವ ಮಾನವ ಕುವೆಂಪು ವಿದ್ಯಾಸಂಸ್ಥೆ, ಸಾಂದೀಪನಿ ಪ್ರೌಢಶಾಲೆ ಹಾಗೂ ಕೂಡಿಗೆಯ ಆಂಜೆಲಾ ವಿದ್ಯಾನಿಕೇತನ ಪ್ರೌಢಶಾಲೆ ಶೇ. 100 ರಷ್ಟು ಫಲಿತಾಂಶ ಪಡೆದಿವೆ.
ಸೋಮವಾರಪೇಟೆಯ ಸರ್ಕಾರಿ ಶಾಲೆಗಳ ಫಲಿತಾಂಶ ವಿವರ: ಕೂಡಿಗೆ ಹಿಂದುಳಿದ ವರ್ಗಗಳ ಮೊರಾರ್ಜಿ ವಸತಿ ಪ್ರೌಢಶಾಲೆ ಶೇ. 95.74, ತೊರೆನೂರು ಸರ್ಕಾರಿ ಪ್ರೌಢಶಾಲೆ ಶೇ. 93.75, ಕಿರಗಂದೂರು ಸರ್ಕಾರಿ ಪ್ರೌಢಶಾಲೆ ಶೇ. 92.86, ಆಲೂರು-ಸಿದ್ದಾಪುರ ಮೊರಾರ್ಜಿ ವಸತಿ ಪ್ರೌಢಶಾಲೆ ಶೇ. 91.30, ಬಸವನಳ್ಳಿ ಸರ್ಕಾರಿ ಪ್ರೌಢಶಾಲೆ ಶೇ. 90. ಶಿರಂಗಾಲ ಸರ್ಕಾರಿ ಪದವಿಪೂರ್ವ ಕಾಲೇಜು ಶೇ. 89.86 ಪಡೆದಿವೆ.
ಐಗೂರು ಸರ್ಕಾರಿ ಪ್ರೌಢಶಾಲೆ ಶೇ. 84.21, ಅಂಕನಳ್ಳಿ ಸರ್ಕಾರಿ ಪ್ರೌಢಶಾಲೆ ಶೇ. 83.33, ಕೊಡ್ಲಿಪೇಟೆ ಮೊರಾರ್ಜಿ ವಸತಿ ಪ್ರೌಢಶಾಲೆ ಶೇ. 81.82, ಹಂಡ್ಲಿ ಸರ್ಕಾರಿ ಪ್ರೌಢಶಾಲೆ ಶೇ. 80, ಕೂಡಿಗೆ ಸರ್ಕಾರಿ ಕ್ರೀಡಾ ಪ್ರೌಢಶಾಲೆ ಶೇ. 78.13, ನಿಡ್ತ ಸರ್ಕಾರಿ ಪ್ರೌಢಶಾಲೆ ಶೇ. 77.78, ಕುಶಾಲನಗರ ಬಾಲಕಿಯರ ಪ್ರೌಢಶಾಲೆ ಶೇ. 74.36 ಸಾಧನೆ ಮಾಡಿದೆ.
ಸೋಮವಾರಪೇಟೆ ಸರ್ಕಾರಿ ಪ್ರೌಢಶಾಲೆ ಶೇ. 71.43, ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆ ಶೇ.68, ನೆಲ್ಲಿಹುದಿಕೇರಿ ಸರ್ಕಾರಿ ಪ್ರೌಢಶಾಲೆ ಶೇ. 67.06, ಕಾನ್‍ಬೈಲ್ ಸರ್ಕಾರಿ ಪ್ರೌಢಶಾಲೆ ಶೇ. 61.11, ಆಲೂರು-ಸಿದ್ದಾಪುರ ಸರ್ಕಾರಿ ಪ್ರೌಢಶಾಲೆ ಶೇ. 57.14, 7ನೇ ಹೊಸಕೋಟೆ ಸರ್ಕಾರಿ ಪ್ರೌಢಶಾಲೆ ಶೇ. 56, ಕುಶಾಲನಗರ ಸರ್ಕಾರಿ ಪ್ರೌಢಶಾಲೆ ಶೇ. 55.26, ಬೆಸೂರು ಸರ್ಕಾರಿ ಪ್ರೌಢಶಾಲೆ ಶೇ. 52.38, ಮಾದಾಪುರ ಸರ್ಕಾರಿ ಪ್ರೌಢಶಾಲೆ ಶೇ. 47.83, ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆ 43.59, ನೇರುಗಳಲೆ ಸರ್ಕಾರಿ ಪ್ರೌಢಶಾಲೆ ಶೇ. 37.50, ಗೊಣಿಮರೂರು ಸರ್ಕಾರಿ ಪ್ರೌಢಶಾಲೆ ಶೇ. 29.41, ಕೊಡ್ಲಿಪೇಟೆ ಸರ್ಕಾರಿ ಪ್ರೌಢಶಾಲೆ ಶೇ. 14.29 ಹಾಗೂ ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆ ಶೂನ್ಯ ಫಲಿತಾಂಶ ಪಡೆದಿದೆ.
ಸೋಮವಾರಪೇಟೆಯ ಅನುದಾನಿತ ಶಾಲೆಗಳ ಫಲಿತಾಂಶ ವಿವರ: ಹೆಬ್ಬಾಲೆ ಪದವಿಪೂರ್ವ ಕಾಲೇಜು ಶೇ. 95, ಶನಿವಾರಸಂತೆ ವಿಘ್ನೇಶ್ವರ ಬಾಲಿಕಾ ಪ್ರೌಢಶಾಲೆ ಶೇ. 86.96, ನಂಜರಾಯಪಟ್ಟಣ ಪ್ರೌಢಶಾಲೆ ಶೇ. 80.85, ಸೋಮವಾರಪೇಟೆ ಸಂತ ಜೋಸೆಫರ ಪ್ರೌಢಶಾಲೆ ಶೇ. 80.39, ಮಾದಾಪುರ ಚೆನ್ನಮ್ಮ ಪದವಿಪೂರ್ವ ಕಾಲೇಜು ಶೇ. 76.92 ಪಡೆದಿವೆ.
ಗೌಡಳ್ಳಿ ಪ್ರೌಢಶಾಲೆ 73.08, ಕುಶಾಲನಗರ ಮೂಕಾಂಬಿಕ ಪ್ರೌಢಶಾಲೆ ಶೇ. 70.59, ಕೊಡಗರಳ್ಳಿ ಸುಂಟಿಕೊಪ್ಪನಾಡು ಪ್ರೌಢಶಾಲೆ ಶೇ. 70.45, ಶಾಂತಳ್ಳಿ ಕುಮಾರಲಿಂಗೇಶ್ವರ ಪ್ರೌಢಶಾಲೆ ಶೇ 66.67, ಕುಶಾಲನಗರ ಫಾತಿಮ ಪ್ರೌಢಶಾಲೆ ಶೇ. 66.04 ರಷ್ಟು ಸಾಧನೆ ಮಾಡಿವೆ.
ಕೊಡ್ಲಿಪೇಟೆ ಪದವಿಪೂರ್ವ ಕಾಲೇಜು ಶೇ. 55.88, ಕೂಡಿಗೆ ಸದ್ಗುರು ಅಪ್ಪಯ್ಯಸ್ವಾಮಿ ಪ್ರೌಢಶಾಲೆ ಶೇ. 51.61, ಸೋಮವಾರಪೇಟೆ ಎಸ್‍ಜೆಎಂ ಬಾಲಿಕಾ ಪ್ರೌಢಶಾಲೆ ಶೇ. 39.13, ಶನಿವಾರಸಂತೆ ಪದವಿಪೂರ್ವ ಕಾಲೇಜು ಶೇ. 37.50, ಬೇಳೂರು ದೊರೆ ವೀರರಾಜೇಂದ್ರ ಪ್ರೌಢಶಾಲೆ ಶೇ. 10.53 ಫಲಿತಾಂಶ ಪಡೆದಿವೆ.