ನಾಪೆÇೀಕ್ಲು, ಆ. 21: ನಾಪೆÇೀಕ್ಲು ನಾಡು ಗೌರಿ ಗಣೇಶೋತ್ಸವ ಸಮಿತಿ ವತಿಯಿಂದ ತಾ. 22ರಂದು (ಇಂದು) ನಡೆಯುವ ಗಣೇಶೋತ್ಸವವನ್ನು ಸರಕಾರದ ಆದೇಶದಂತೆ ಸರಳವಾಗಿ ಆಚರಿಸಲು ತೀರ್ಮಾನಿಸಲಾಗಿದೆ.

ಅದರಂತೆ ಬೆಳಿಗ್ಗೆ 11.20ಕ್ಕೆ ಗಣಹೋಮ, ಗಣೇಶ ಮೂರ್ತಿ ಪ್ರತಿಷ್ಠಾಪನೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ, ಮಧ್ಯಾಹ್ನ 1 ಗಂಟೆಗೆ ಅನ್ನದಾನ ನಡೆಯಲಿದೆ. ಅಪರಾಹ್ನ 2.45 ಗಂಟೆಗೆ ಗಣೇಶ ಮೂರ್ತಿಯ ವಿಸರ್ಜನೆ ನಡೆಸಲಾಗುವದು ಎಂದು ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು ತಿಳಿಸಿದ್ದಾರೆ.