ವೀರಾಜಪೇಟೆ, ಆ. 24: ವೀರಾಜಪೇಟೆಯ ಅಪ್ಪಯ್ಯಸ್ವಾಮಿ ರಸ್ತೆಯ ತಿಮ್ಮಯ್ಯ ಲೇಔಟ್‍ನಲ್ಲಿ ರೂ. 8 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ 140 ಮೀಟರ್ ಉದ್ದದ ಕಾಂಕ್ರೀಟ್ ರಸ್ತೆಯನ್ನು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಿದರು. ಇಲ್ಲಿನ ಪಟ್ಟಣ ಪಂಚಾಯಿತಿ ಜನಪರ ಕಾಮಗಾರಿಗಳಿಗೆ ಆದ್ಯತೆಯನ್ನು ನೀಡುವ ಸಲುವಾಗಿ ಜನರಿಗೆ ಹಂತ ಹಂತವಾಗಿ ಸೌಲಭ್ಯಗಳನ್ನು ನೀಡುತ್ತಿದೆ ಎಂದರು.
ಇದೇ ಸಂದರ್ಭದಲ್ಲಿ ಬಡಾವಣೆಯ ಪ್ರಮುಖರು, ಪಟ್ಟಣ ಪಂಚಾಯಿತಿ ಸದಸ್ಯರುಗಳು, ಮುಖ್ಯಾಧಿಕಾರಿ ಎ.ಎಂ.ಶ್ರೀಧರ್, ಅಭಿಯಂತರ ಎಂ.ಪಿ.ಹೇಮ್‍ಕುಮಾರ್ ಮತ್ತಿತರರು ಹಾಜರಿದ್ದರು.
ಗಾಂಧಿನಗರದಲ್ಲಿ ರೂ. 7ಲಕ್ಷ ವೆಚ್ಚದಲ್ಲಿ 120 ಮೀಟರ್ ಉದ್ದದ ಕಾಂಕ್ರೀಟ್ ರಸ್ತೆ ಹಾಗೂ ವಿಜಯನಗರ ಬಡಾವಣೆಯಲ್ಲಿ ರೂ. 25ಲಕ್ಷ ವೆಚ್ಚದಲ್ಲಿ 250 ಮೀಟರ್ ಕಾಂಕ್ರೀಟ್ ರಸ್ತೆ ಹಾಗೂ ತಡೆಗೋಡೆಯನ್ನು ಶಾಸಕ ಬೋಪಯ್ಯ ಉದ್ಘಾಟಿಸಿದರು.