ಮಡಿಕೇರಿ, ಆ.23: ಸ್ಟಾಫ್ ಸೆಲೆಕ್ಷನ್ ಕಮಿಷನ್ ಅವರು ದೆಹಲಿ ಪೊಲೀಸ್ ವಿಭಾಗದಲ್ಲಿ ಖಾಲಿ ಇರುವ ಕಾನ್ಸ್‍ಟೇಬಲ್ (ಎಕ್ಸಿಕ್ಯೂಟಿವ್) ಪುರುಷ ಮತ್ತು ಮಹಿಳೆ ಸುಮಾರು 5846 (ಮಹಿಳೆಯರಿಗೆ 1944 ಹುದ್ದೆಗಳು) ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಯು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿರಬೇಕು. (2020 ಸೆಪ್ಟೆಂಬರ್ 7 ಕ್ಕೆ ಅನ್ವಯವಾಗುವಂತೆ), ದೆಹಲಿ ಪೊಲೀಸ್‍ನಲ್ಲಿ ಕಾರ್ಯನಿರ್ವಹಿಸುತ್ತಿರುವ, ನಿವೃತ್ತಿ ಹೊಂದಿದ ಸಿಬ್ಬಂದಿಗಳ ಮಕ್ಕಳಿಗೆ ವಿದ್ಯಾರ್ಹತೆಯಲ್ಲಿ ವಿನಾಯಿತಿ ಇದ್ದು, ಪ್ರಥಮ ಪಿಯುಸಿ ತೇರ್ಗಡೆ ಹೊಂದಿರಬೇಕು. ಪುರುಷ ಅಭ್ಯರ್ಥಿಗಳು ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯ ದಿನದಂದು ಕಡ್ಡಾಯವಾಗಿ ಚಾಲ್ತಿಯಲ್ಲಿರುವ ಚಾಲನಾ ಪರವಾನಿಗೆ (ಮೋಟಾರ್ ಸೈಕಲ್ ಅಥವಾ ಕಾರು) ಹೊಂದಿರಬೇಕು.

2020ರ ಜುಲೈ, 1 ಕ್ಕೆ ಅನ್ವಯವಾಗುವಂತೆ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಠ 25 ವರ್ಷ ವಯೋಮಿತಿಯಲ್ಲಿರಬೇಕು. ಹಿಂದುಳಿದ ವರ್ಗದ ಅಭ್ಯರ್ಥಿಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಧವೆಯರು, ಮಾಜಿ ಸೈನಿಕರು ಹಾಗೂ ದೆಹಲಿ ಪೊಲೀಸ್ ಇಲಾಖಾ ಅಭ್ಯರ್ಥಿಗಳು ಮತ್ತು ದೆಹಲಿ ಪೊಲೀಸ್ ಕರ್ತವ್ಯ ನಿರ್ವಹಿಸುತ್ತಿರುವ, ನಿವೃತ್ತಿ ಹೊಂದಿದ ಸಿಬ್ಬಂದಿಗಳ ಮಕ್ಕಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ.

ನೇಮಕಾತಿಯು ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. (ಇಂಗ್ಲೀಷ್/ಹಿಂದಿ), ಕಂಪ್ಯೂಟರ್ ಆಧಾರಿತ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯನ್ನು ದೆಹಲಿ ಪೊಲೀಸ್ ಮುಖಾಂತರ ದೆಹಲಿಯಲ್ಲಿ ನಡೆಸಲಾಗುವುದು. ಅರ್ಜಿಯನ್ನು ವೆಬ್‍ಸೈಟ್ hಣಣಠಿs://ssಛಿ.ಟಿiಛಿ.iಟಿ ನಲ್ಲಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 7 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ:080-25502520/ 9483862020, ವೆಬ್‍ಸೈಟ್ hಣಣಠಿs://ssಛಿ.ಟಿiಛಿ.iಟಿ ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.