ಮಡಿಕೇರಿ, ಆ. 23: ಸರ್ಕಾರಿ ಪಾಲಿಟೆಕ್ನಿಕ್ ಕುಶಾಲನಗರ ಇಲ್ಲಿ 2020-21ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರಥಮ ಡಿಪ್ಲೋಮಾ ಪ್ರವೇಶ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ತಾ. 29 ರವರೆಗೆ ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಇದೆ. ಆಟೋಮೊಬೈಲ್, ಸಿವಿಲ್, ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕಲ್ ಹಾಗೂ ಮೆಕ್ಕಾನಿಕಲ್ ವಿಭಾಗಗಳಿಗೆ ಪ್ರವೇಶ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಕಾಲೇಜಿನ ಮುಖಾಂತರ ಆನ್‍ಲೈನ್‍ಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ. 08276-274334, ಮೊ. 9611470407, 9481966539 ಅನ್ನು ಸಂಪರ್ಕಿಸಬಹುದು.