ಕುಶಾಲನಗರ, ಆ. 24: ಕುಶಾಲನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ್ ಅರಸ್ ಅವರ ಜನ್ಮದಿನ ಆಚರಿಸಲಾಯಿತು.

ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮವನ್ನು ಐಎನ್‍ಟಿಯುಸಿ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಸ್. ಅನಂತಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ರಾಜೀವ್ ಗಾಂಧಿ ಹಾಗೂ ದೇವರಾಜ್ ಅರಸ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.

ಕೆಪಿಸಿಸಿ ಸಂಯೋಜಕ ಪ್ರದೀಪ್ ರೈ ಪಾಂಬಾರು, ಕಾರ್ಮಿಕ ಘಟಕದ ರಾಜ್ಯ ಕಾರ್ಯದರ್ಶಿ ಅಜ್ಜಳ್ಳಿ ರವಿ, ಕುಶಾಲನಗರ ನಗರ ಕಾಂಗ್ರೆಸ್ ಘಟಕ ಅಧ್ಯಕ್ಷ ಶರೀಫ್ ಇಬ್ರಾಹಿಂ, ಐಎನ್‍ಟಿಯುಸಿ ಜಿಲ್ಲಾ ಘಟಕ ಅಧ್ಯಕ್ಷ ಗೋವಿಂದರಾಜ್‍ದಾಸ್, ಜನಪ್ರತಿನಿಧಿಗಳಾದ ರಾಧಾ, ಕಿಶೋರ್, ಪ್ರಮುಖರಾದ ಗೀತಾ, ಜನಾರ್ಧನ್, ವೀರೇಂದ್ರ, ನಿಂಗರಾಜ್ ಮತ್ತಿತರರು ಇದ್ದರು.