ಮಡಿಕೇರಿ, ಆ. 25: ಕೇಂದ್ರ ಸರಕಾರದ ಜನ ವಿರೋಧಿ ನೀತಿಗಳನ್ನು ಪ್ರತಿಭಟಿಸಿ ಮತ್ತು ಜನಪರವಾದ 16 ಬೇಡಿಕೆಗಳನ್ನು ಮಂಡಿಸಿ ಅವುಗಳನ್ನು ಕೇಂದ್ರ ಸರಕಾರವು ಅನುಷ್ಠಾನಕ್ಕೆ ತರುವಂತೆ ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ಕೇಂದ್ರ ಸಮಿತಿಯ ಕರೆಯಂತೆ ಕೊಡಗು ಜಿಲ್ಲಾ ಘಟಕದ ವತಿಯಿಂದ ತಾ. 28 ರಂದು ಮಡಿಕೇರಿಯಲ್ಲಿ ಜಿಲ್ಲಾಧಿಕಾರಿಯವರ ಕಚೇರಿಯ ಮುಂಭಾಗ ಬೆ. 11 ಗಂಟೆಗೆ ಪ್ರತಿಭಟನೆ ನಡೆಯಲಿದೆ ಎಂದು ಕಾರ್ಯದರ್ಶಿ ದುರ್ಗಾಪ್ರಸಾದ್ ತಿಳಿಸಿದ್ದಾರೆ.