ಪೆÇನ್ನಂಪೇಟೆ. ಆ. 26: ಅರಣ್ಯ ಇಲಾಖೆ ವತಿಯಿಂದ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ಮುಂದುವರೆದಿದ್ದು, ಪೆÇನ್ನಂಪೇಟೆ ವಲಯ ಅರಣ್ಯ ವ್ಯಾಪ್ತಿಯ ಅರವತೊಕ್ಕಲು ಗ್ರಾಮದ ಕಾಫಿ ತೋಟಗಳಲ್ಲಿ ಕಾಡಾನೆಗಳು ಬೀಡು ಬಿಟ್ಟಿರುವ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 9.30 ರಿಂದ ಅರ್ವತೊಕ್ಕಲುವಿನ ಕಾಫಿ ತೋಟಗಳಲ್ಲಿ ಆನೆಗಳ ಹೆಜ್ಜೆ ಗುರುತಿನ ಜಾಡು ಹಿಡಿದು ಹುಡುಕಾಟ ನಡೆಸಲಾಯಿತು. ಆದರೆ ಎಲ್ಲಿಯೂ ಕೂಡ ಕಾಡಾನೆಗಳು ಕಾರ್ಯಾಚರಣೆ ತಂಡಕ್ಕೆ ಕಾಣಿಸಿಕೊಳ್ಳಲಿಲ್ಲ. ವಲಯ ಅರಣ್ಯಾಧಿಕಾರಿ ಅರಮಣಮಾಡ ತೀರ್ಥ ಅವರ ಮಾರ್ಗದರ್ಶನದಲ್ಲಿ ಉಪ ವಲಯ ಅರಣ್ಯಾಧಿಕಾರಿಗಳು ಹಾಗೂ ಆರ್‍ಆರ್‍ಟಿ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
-ಚನ್ನನಾಯಕ