ವೀರಾಜಪೇಟೆ, ಆ. 27: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಧಾರ್ಮಿಕ ಪ್ರಜ್ಞೆಯನ್ನು ಬೆಳೆಸಿಕೊಳ್ಳುವುದರೊಂದಿಗೆ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಚಟುವಟಿಕೆಗಳ ಮಾಹಿತಿಯನ್ನು ಜನರು ಪಡೆದುಕೊಳ್ಳುತ್ತಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಶಶಿ ಸುಬ್ರಮಣಿ ಹೇಳಿದರು. ಬೈರಂಬಾಡ-ಹಾಲುಗುಂದದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಹಾಗೂ ವರಮಹಾಲಕ್ಷ್ಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಗ್ರಾಮಾಭಿವೃದ್ಧಿ ಯೋಜನೆಯ ಮಡಿಕೇರಿ-ವೀರಾಜಪೇಟೆ ಯೋಜನಾ ಅಧಿಕಾರಿ ಸದಾಶಿವ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವೀರಾಜಪೇಟೆ ತಾಲೂಕಿನಲ್ಲಿ 3150 ಸಂಘಗಳು ಕಾರ್ಯ ನಿರ್ವಹಿಸುತ್ತಿವೆ ಎಂದರು.

ವೇದಿಕೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ವೀರಾಜಪೇಟೆ ವಲಯದ ರತ್ನಮೈಪಾಳ, ಸೇವಾ ಪ್ರತಿನಿಧಿಗಳಾದ ಮೀನಾಕ್ಷಿ, ಬೈರಂಬಾಡದ ಪದ್ಮಲತಾ, ರೇಖಾ, ಗಾಂಧಿನಗರ ಮೀನಾಕ್ಷಿ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.