ಗೋಣಿಕೊಪ್ಪಲು, ಆ. 27: ತಾಲೂಕು ಬಿಜೆಪಿ ಒಬಿಸಿ ಮೋರ್ಚಾದ ಸಭೆ ಗೋಣಿಕೊಪ್ಪಲು ವಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಭಾಂಗಣದಲ್ಲಿ ನಡೆಯಿತು. ಒಬಿಸಿ ತಾಲೂಕು ಅಧ್ಯಕ್ಷ ಕೆ. ರಾಜೇಶ್ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಗುಮ್ಮಟ್ಟೀರ ಕಿಲನ್ ಗಣಪತಿ ಮಾತನಾಡಿ, ಬಿಜೆಪಿ ಪಕ್ಷವು ಎಲ್ಲ ವರ್ಗದವರನ್ನು ಒಟ್ಟುಗೂಡಿಸುವ ಮೂಲಕ ಪಕ್ಷ ಬಲವರ್ಧನೆ ಆಗುತ್ತಿದೆ. ಒಬಿಸಿ ಮೋರ್ಚಾವು ತಾಲೂಕಿನಲ್ಲಿ ಅಪಾರ ಸಂಖ್ಯೆಯ ಕಾರ್ಯಕರ್ತರನ್ನು ಪಕ್ಷಕ್ಕೆ ಕರೆ ತರುವಲ್ಲಿ ಯಶಸ್ವಿಯಾಗಿದೆ. ಸರ್ಕಾರದ ಜನಪರ ಯೋಜನೆಗಳು ಜನರಿಗೆ ತಲುಪುವಂತೆ ಕಾರ್ಯಕರ್ತರು ಶ್ರಮಿಸಬೇಕೆಂದರು.

ವೀರಾಜಪೇಟೆ ಮಂಡಲ ಅಧ್ಯಕ್ಷ ನೆಲ್ಲೀರ ಚಲನ್ ಮಾತನಾಡಿ, ಸಕ್ರಿಯ ಕಾರ್ಯಕರ್ತರು ಪಕ್ಷದ ಬೆನ್ನೆಲುಬಾಗಿದ್ದಾರೆ. ಇವರ ಶ್ರಮದಿಂದ ಸರ್ಕಾರವು ಅಧಿಕಾರದಲ್ಲಿರುವುದರಿಂದ ಸಾಮಾನ್ಯ ಕಾರ್ಯಕರ್ತರ ಸಮಸ್ಯೆಗಳನ್ನು ಬಗೆಹರಿಸುವುದು ನಾಯಕರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಪಕ್ಷದ ಮುಖಂಡರು ಕೆಲಸ ನಿರ್ವಹಿಸುವಂತೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಸಿ.ಕೆ. ಬೋಪಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಭೀಮಯ್ಯ, ಖಜಾಂಚಿ ಚೆಪ್ಪುಡೀರ ಮಾಚು, ಅಕ್ರಮ-ಸಕ್ರಮ ಸಮಿತಿಯ ಅಧ್ಯಕ್ಷ ಗಿರೀಶ್ ಗಣಪತಿ, ಯುವ ಮೋರ್ಚಾ ತಾಲೂಕು ಅಧ್ಯಕ್ಷ ಕವನ್ ಕಾರ್ಯಪ್ಪ, ಗೋಣಿಕೊಪ್ಪ ನಗರ ಬಿಜೆಪಿ ಅಧ್ಯಕ್ಷ ಗಾಂಧಿ ದೇವಯ್ಯ, ಒಬಿಸಿ ಮೋರ್ಚಾದ ತಾಲೂಕು ಉಪಾಧ್ಯಕ್ಷ ಸುಬ್ರಮಣಿ, ತಾಲೂಕು ಪ್ರಧಾನ ಕಾರ್ಯದರ್ಶಿ ನವೀನ್, ಸದಸ್ಯರಾದ ಯು. ಸುಬ್ರಮಣಿ, ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಜ್ಜಿಕುಟ್ಟೀರ ಪ್ರವೀಣ್ ಮುಂತಾದವರು ಹಾಜರಿದ್ದರು. ಈ ಸಂದರ್ಭ ಗೋಣಿಕೊಪ್ಪ ಬಿಜೆಪಿ ಒಬಿಸಿ ಮೋರ್ಚಾದ ಅಧ್ಯಕ್ಷರಾಗಿ ಹೆಚ್.ಸಿ. ಸತೀಶ್ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಬಿ.ಪಿ. ಸುಭಾಶ್, ಎಂ.ಆರ್. ಮಂಜು, ಟಿ.ಜಿ. ಕುಮಾರ್, ಸಿ.ಎ. ಪ್ರದೀಪ್, ಡಿ.ಎಸ್. ದಿಲೀಪ್, ಪ್ರಧಾನ ಕಾರ್ಯದರ್ಶಿಯಾಗಿ ಎನ್.ಸಿ. ಬಿನೀಶ್, ಸಹ ಕಾರ್ಯದರ್ಶಿಯಾಗಿ ಡಿ.ಎ. ವಿನು, ಕೆ.ವಿ. ಸುನಿಲ್, ಖಜಾಂಚಿಯಾಗಿ ಜೆ. ರವಿ ಹಾಗೂ ಸದಸ್ಯರನ್ನು ನೇಮಕಗೊಳಿಸಲಾಯಿತು.