ಮಡಿಕೇರಿ, ಆ. 27: ಪ್ರಸಕ್ತ ಸಾಲಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ ದಾಖಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ತಾ. 31 ಕೊನೆಯ ದಿನವಾಗಿದೆ. 5ನೇ ತರಗತಿಯಲ್ಲಿ ಶೇ. 60 ಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು. ಆಯ್ಕೆಯಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಾದ ಶ್ರೀ ಸಾಯಿ ಶಂಕರ ಎಜುಕೇಷನಲ್ ಇನ್ಸ್‍ಟ್ಯೂಷನ್ಸ್, ಪ್ರಶಾಂತಿ ನಿಲಯ ಪೊನ್ನಂಪೇಟೆ, ಸೌತ್ ಕೊಡಗು ಮತ್ತು ಸೆಂಟ್ ಜೋಸೆಪ್ಸ್ ಗಲ್ರ್ಸ್ ಕಾಂಪೋಸಿಟ್ ಹೈ ಸ್ಕೂಲ್, ಮಡಿಕೇರಿ ಇಲ್ಲಿ 6ನೇ ತರಗತಿಗೆ ಪ್ರವೇಶ ಅವಕಾಶವನ್ನು ಕಲ್ಪಿಸಲಾಗುವುದು.

ವಿದ್ಯಾರ್ಥಿಗಳಿಂದ ಜಾತಿ ದೃಢೀಕರಣ ಪ್ರಮಾಣ ಪತ್ರ, ಆದಾಯ ದೃಢೀಕರಣ ಪತ್ರ ಹಾಗೂ ಮುಖ್ಯೋಪಾಧ್ಯಾಯರಿಂದ ದೃಢೀಕೃತಗೊಂಡ ಅಂಕ ಪಟ್ಟಿಯನ್ನು ಸಲ್ಲಿಸುವುದು. ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಪೋಷಕರ ಆದಾಯ ಮಿತಿ ರೂ.2 ಲಕ್ಷ ಒಳಗೆ ಇರಬೇಕು. (ಈ ಬಗ್ಗೆ ತಹಶೀಲ್ದಾರ್‍ರವರಿಂದ ಪಡೆದ ಆದಾಯ ಪ್ರಮಾಣ ಪತ್ರ ಸಲ್ಲಿಸುವುದು)

ಅರ್ಜಿಯನ್ನು ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿ 9945986995, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಪೊನ್ನಂಪೇಟೆ-08274-261261, ಸಹಾಯಕ ನಿರ್ದೇಶಕರು(ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ-08272-223552 ಮತ್ತು ಸಹಾಯಕ ನಿರ್ದೇಶಕರು(ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ-08276-281115 ನ್ನು ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಅವರು ತಿಳಿಸಿದ್ದಾರೆ.

ಡಿಪ್ಲೋಮಾ ಕೋರ್ಸುಗಳ ಪ್ರವೇಶಕ್ಕೆ

2020-21ನೇ ಸಾಲಿಗೆ ಮೂರು ವರ್ಷಗಳ ಅವಧಿಯ ಡಿಪ್ಲೋಮಾ ಕೋರ್ಸುಗಳ ಪ್ರವೇಶಕ್ಕೆ (ಅಖಿಲ ಭಾರತ ಮಟ್ಟದಲ್ಲಿ) ವಿಶೇಷಚೇತನ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆರ್ಕಿಟೆಕ್ಚರ್, ಕಮರ್ಷಿಯಲ್ ಪ್ರಾಕ್ಟೀಸ್, ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್, ಜ್ಯುಯಲರಿ ಡಿಸೈನ್ ಮತ್ತು ಟೆಕ್ನಾಲಜಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್, ಕಂಪ್ಯೂಟರ್ ಅಪ್ಲಿಕೇಷನ್ಸ್ ಫಾರ್ ದಿ ವಿಷ್ಯುಯಲಿ ಇಂಪೇರ್ಡ್.

ಕರ್ನಾಟಕ ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಟ ಶೇ. 35 ಅಂಕಗಳೊಂದಿಗೆ ತೇರ್ಗಡೆ ಹಾಗೂ ಅಂಗವೈಕಲ್ಯತೆಯ ಲಕ್ಷಣಗಳನ್ನು ಹೊಂದಿರಬೇಕು. ಮೂಳೆ ಮತ್ತು ಕೀಲು ಅಂಗವಿಕಲತೆ ಶೇ. 40 ಮತ್ತು ಮೇಲ್ಪಟ್ಟು, ಕಿವುಡು ಮತ್ತು ಮೂಗು ಅಂಗವಿಕಲತೆ-60 ಡಿಬಿ ಮತ್ತು ಮೇಲ್ಪಟ್ಟು, ಭಾಗಶಃ ಮತ್ತು ಪೂರ್ಣ ಅಂಧತ್ವ ಜ್ಯುಯಲರಿ ಡಿಸೈನ್ ಮತ್ತು ಟೆಕ್ನಾಲಜಿ ಕೋರ್ಸಿಗೆ ಸಾಮಾನ್ಯ (ವಿಶೇಷಚೇತನರಲ್ಲದ) ಅಭ್ಯರ್ಥಿಗಳೂ ಸಹ ಜೆಎಸ್‍ಎಸ್ ಮಹಾವಿದ್ಯಾಪೀಠದ ಯೋಜನೆಯಡಿಯಲ್ಲಿ ಪ್ರವೇಶ ಪಡೆಯಬಹುದು.

ಅರ್ಹ ವಿದ್ಯಾರ್ಥಿಗಳಿಗೆ ರಾಜ್ಯ ಮತ್ತು ರಾಷ್ಟ್ರಮಟ್ಟದ ವಿದ್ಯಾರ್ಥಿವೇತನದ ಆರ್ಥಿಕ ಸಹಾಯ ದೊರೆಯುತ್ತದೆ. ಪಾಲಿಟೆಕ್ನಿಕ್‍ನ ಯಶಸ್ವಿ ವಿದ್ಯಾರ್ಥಿಗಳಿಗೆ ಉದ್ಯೋಗ ಮತ್ತು ತರಬೇತಿ ಕೇಂದ್ರದ ಮೂಲಕ ಉದ್ಯೋಗಾವಕಾಶವನ್ನು ಕಲ್ಪಿಸಿಕೊಡಲಾಗುತ್ತಿದೆ. ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರುಗಳಿಗೆ ಪ್ರತ್ಯೇಕ ವಿದ್ಯಾರ್ಥಿನಿಲಯದ ಸೌಲಭ್ಯ ಕಲ್ಪಿಸಲಾಗಿದೆ.

ಪ್ರವೇಶಕ್ಕೆ ಅರ್ಜಿ(ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 100 ಹಾಗೂ ಎಸ್‍ಸಿ, ಎಸ್‍ಟಿ, ಸಿ-1 ವರ್ಗದವರಿಗೆ ರೂ. 50) ನಗದು ಅಥವಾ ಡಿಡಿ /ಎಂಒ ಮೂಲಕ ದಿ ಪ್ರಿನ್ಸಿಪಾಲ್, ಜೆಎಸ್‍ಎಸ್‍ಪಿಡಿಎ, ಮೈಸೂರು ಇವರ ಹೆಸರಿಗೆ ಮೈಸೂರಿನಲ್ಲಿ ಸಂದಾಯವಾಗುವಂತೆ ಕಳುಹಿಸಿ ಪಡೆಯಬಹುದು ಅಥವಾ ವೆಬ್‍ಸೈಟ್ ಮೂಲಕ ಡೌನ್‍ಲೋಡ್ ಮಾಡಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ ತಿತಿತಿ.ರಿssಠಿಜಚಿ.oಡಿg / ಇ-ಮೇಲ್ / ದೂರವಾಣಿ ಮೂಲಕ ಸಂಪರ್ಕಿಸಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಸೆಪ್ಟೆಂಬರ್ 12 ರೊಳಗೆ ಕಚೇರಿಗೆ ತಲುಪಿಸತಕ್ಕದ್ದು.

ಪ್ರವೇಶಕ್ಕೆ ಬೇಕಾದ ಅರ್ಹತೆಗಳು: ಕರ್ನಾಟಕ ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಮೂಳೆ ಮತ್ತು ಕೀಲು ಅಂಗವಿಕಲತೆ ಇದ್ದರೆ ಶೇ.40 ಕ್ಕಿಂತ ಹೆಚ್ಚಿರಬೇಕು. ಶ್ರವಣ ದೋಷವಿದ್ದರೆ 60 ಡಿಬಿಗಿಂತ ಹೆಚ್ಚಿರಬೇಕು. ಪೂರ್ಣ ಅಥವಾ ಭಾಗಶಃ ಅಂಧತ್ವವುಳ್ಳ ವಿದ್ಯಾರ್ಥಿಗಳಾಗಿರಬೇಕು (ಕ್ರಮ ಸಂಖ್ಯೆ 6ನೇ ಕೋರ್ಸಿಗೆ). ಭಾಗಶಃ ಅಂಧತ್ವ 6/60 ಅಥವಾ 20/200 ಸ್ನೆಲೆನ್. ತಜ್ಞರನ್ನೊಳಗೊಂಡ ಸಮಿತಿಯಿಂದ ಸರ್ಕಾರದ ನಿಯಮಾವಳಿಗಳ ಪ್ರಕಾರ ಕೋರ್ಸುಗಳ ಪ್ರವೇಶಕ್ಕೆ ವಿದ್ಯಾರ್ಥಿಗಳ ಆಯ್ಕೆಯನ್ನು ನಡೆಸಲಾಗುವುದು.

ಮುಖ್ಯಾಂಶಗಳು: ಶಾಲಾ ಕಟ್ಟಡ, ಪ್ರಯೋಗಾಲಯ ಮತ್ತು ತರಬೇತಿ ಕೊಠಡಿಗಳನ್ನು ವಿಶೇಷಚೇತನರಿಗೆ ಸರಿ ಹೊಂದುವಂತೆ ರೂಪಿಸಲಾಗಿದೆ. ಹಾಸ್ಟೆಲ್ ಸೌಲಭ್ಯವನ್ನು ಒದಗಿಸಲಾಗಿದೆ. ಕರ್ನಾಟಕ ಸರ್ಕಾರ ಮತ್ತು ಭಾರತ ಸರ್ಕಾರಗಳ ನಿಯಮಾನುಸಾರವಾಗಿ ವಿದ್ಯಾರ್ಥಿವೇತನ ಸೌಲಭ್ಯವಿರುತ್ತದೆ. ಉತ್ತಮ ಗ್ರಂಥಾಲಯ ವ್ಯವಸ್ಥೆಯನ್ನು ಮಾಡಲಾಗಿದೆ.

ವಿಶೇಷಚೇತನ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬ್ಯಾಂಕ್ ಸೌಲಭ್ಯ ಮತ್ತು ಆರೋಗ್ಯ ಕೇಂದ್ರದ ವ್ಯವಸ್ಥೆಗಳನ್ನು ಮಾಡಲಾಗಿದೆ. ಹೆಚ್ಚಿನ ವಿವರಗಳಿಗೆ ಪ್ರಾಂಶುಪಾಲರು ಜೆಎಸ್‍ಎಸ್ ವಿಶೇಷಚೇತನರ ಪಾಲಿಟೆಕ್ನಿಕ್, ಜೆಎಸ್‍ಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಸಮುಚ್ಛಯ ಮೈಸೂರು 570006, ದೂರವಾಣಿ 0821-2548315, 2548316 ಇ-ಮೇಲ್:ರಿssಠಿಜಚಿ@gmಚಿiಟ.ಛಿom, ತಿebsiಣe: ತಿತಿತಿ.ರಿssಠಿಜಚಿ.oಡಿgನ್ನು ಸಂಪರ್ಕಿಸಬಹುದು ಎಂದು ಮೈಸೂರು ಜೆಎಸ್‍ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ಜೆಎಸ್‍ಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು ತಿಳಿಸಿದ್ದಾರೆ.

ಅರೆ ವೈದ್ಯಕೀಯ ಕೋರ್ಸ್‍ಗಳ ತರಬೇತಿಗೆ

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ ಇಲ್ಲಿನ ಅರೆ ವೈದ್ಯಕೀಯ ಕೋರ್ಸ್‍ಗಳ ತರಬೇತಿಗಾಗಿ ಅರೆ ವೈದ್ಯಕೀಯ ಮಂಡಳಿಯು ಸರ್ಕಾರಿ ಕೋಟದ ಸೀಟುಗಳಿಗೆ ಆನ್‍ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಎಲ್ಲಾ ಕೋರ್ಸ್‍ಗಳಿಗೆ ಪಿ.ಯು.ಸಿ ವಿಜ್ಞಾನ/ ತತ್ಸಮಾನ ಪರೀಕ್ಷೆ ಭೌತಶಾಸ್ತ್ರ, ರಸಾಯನ ಶಾಸ್ತ್ರ, ಜೀವಶಾಸ್ತ್ರ ವಿಷಯಗಳನ್ನು ತೆಗೆದುಕೊಂಡು ತೇರ್ಗಡೆ ಹೊಂದಿರಬೇಕು. ಎಸ್‍ಎಸ್‍ಎಲ್‍ಸಿ/ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಅರ್ಜಿದಾರರು 1 ರಿಂದ 10ನೇ ತರಗತಿ ಅಥವಾ ಪಿಯುಸಿಯವರೆಗೆ ಕನಿಷ್ಟ 7 ವರ್ಷಗಳೂ ಕರ್ನಾಟಕದಲ್ಲಿ ವಿದ್ಯಾಭ್ಯಾಸ ಮಾಡಿರಬೇಕು. ಇದಕ್ಕೆ ಸಂಬಂಧಿಸಿದ ದೃಢೀಕರಣ ಪ್ರತಿಯನ್ನು ಅರ್ಜಿಯೊಂದಿಗೆ ಸಲ್ಲಿಸುವುದು.

ಪಿ.ಯು.ಸಿ. ಅಭ್ಯರ್ಥಿಗಳಿಗೆ 2 ವರ್ಷಗಳು ಜೊತೆಗೆ 3 ತಿಂಗಳ ಇಂಟರ್ನ್‍ಶಿಪ್ ಹಾಗೂ ಎಸ್‍ಎಸ್‍ಎಲ್.ಸಿ 3 ವರ್ಷಗಳು ಜೊತೆಗೆ 3 ತಿಂಗಳ ಇಂಟರ್‍ನ್‍ಶಿಪ್ ಇದೆ. ವಯೋಮಿತಿ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷಗಳು, ಪ.ಜಾ/ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು ಮೀರಬಾರದು. ಅರ್ಜಿ ನಮೂನೆ ಜಾಲತಾಣ hಣಣಠಿ://ತಿತಿತಿ.ಠಿmbಞಚಿಡಿಟಿಚಿಣಚಿಞಚಿ.oಡಿg ನಲ್ಲಿ ಲಭ್ಯವಿದೆ.

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿಯಲ್ಲಿ ಪ್ರಸ್ತುತ ಲಭ್ಯವಿರುವ ಅರೆವೈದ್ಯಕೀಯ ಕೋರ್ಸ್‍ಗಳ ವಿವರ ಇಂತಿದೆ. ಡಿಪ್ಲೋಮಾ ಇನ್ ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ (ಡಿಎಂಎಲ್‍ಟಿ), ಡಿಪ್ಲೋಮಾ ಇನ್ ಮೆಡಿಕಲ್ ಇಮೇಜಿಂಗ್ ಟೆಕ್ನಾಲಜಿ (ಡಿಎಂಐಟಿ), ಡಿಪ್ಲೋಮಾ ಇನ್ ಹೆಲ್ತ್ ಇನ್ಸ್‍ಪೆಕ್ಟರ್ (ಡಿಹೆಚ್‍ಐ), ಡಿಪ್ಲೋಮಾ ಇನ್ ಮೆಡಿಕಲ್ ರೆಕಾಡ್ರ್ಸ್ ಟೆಕ್ನಾಲಜಿ (ಡಿಎಂಆರ್‍ಟಿ), ಡಿಪ್ಲೋಮಾ ಇನ್ ಡಯಾಲಿಸಿಸ್ ಟೆಕ್ನಾಲಜಿ (ಡಿಡಿಟಿ), ಡಿಪ್ಲೋಮಾ ಇನ್ ಆಪರೇಷನ್ ಥಿಯೇಟರ್ ಮತ್ತು ಅನಸ್ಥೆಶಿಯಾ ಟೆಕ್ನಾಲಜಿ(ಡಿಓಟಿ ಮತ್ತು ಎಟಿ), ಡಿಪ್ಲೋಮಾ ಇನ್ ಆಪ್ತಾಲ್ಮಿಕ್ ಟೆಕ್ನಾಲಜಿ (ಡಿಓಟಿ).

ಅರ್ಜಿ ಸಲ್ಲಿಸಲು ತಾ. 31 ಕೊನೆ ದಿನವಾಗಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.400, ಪ.ಜಾ/ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ ರೂ.250, ಅರ್ಜಿ ಶುಲ್ಕವನ್ನು ಕಡ್ಡಾಯವಾಗಿ ಆನ್‍ಲೈನ್ ಮೂಲಕ ಡೆಬಿಟ್/ ಕ್ರೆಡಿಟ್/ ನೆಟ್ ಬ್ಯಾಂಕಿಂಗ್ ಮೂಲಕವೇ ಪಾವತಿಸುವಂತೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್ ಕಾರ್ಯಪ್ಪ ಅವರು ತಿಳಿಸಿದ್ದಾರೆ.