ಮಡಿಕೇರಿ, ಆ. 28: ಜಿಲ್ಲೆಯ ಮೊರಾರ್ಜಿ ದೇಸಾಯಿ, ಏಕಲವ್ಯ ಮಾದರಿ/ ಅಟಲ್ ಬಿಹಾರಿ ವಾಜಪೇಯಿ, ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಿಗೆ 2020-21ನೇ ಸಾಲಿನ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ವಸತಿ ಶಿಕ್ಷಣಗಳ ಸಂಸ್ಥೆಗಳ ಸಂಘದಡಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಿಗೆ 6ನೇ ತರಗತಿಗೆ ದಾಖಲಾತಿಗೆ ಅರ್ಜಿ ಆಹ್ವಾನಿಸಲಾಗಿತ್ತು, ಅರ್ಜಿ ಸಲ್ಲಿಸಲು ಆಗಸ್ಟ್ 25 ನಿಗದಿಪಡಿಸಲಾಗಿತ್ತು, ಆದರೆ ದಿನಾಂಕವನ್ನು ಸೆಪ್ಟೆಂಬರ್ 5 ರವರೆಗೆ ವಿಸ್ತರಿಸಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ ಹಾಗೂ “ಮಾಹಿತಿ ಪುಸ್ತಕ-2020” ವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‍ಸೈಟ್ hಣಣಠಿ://ಞeಚಿ.ಞಚಿಡಿ.ಟಿiಛಿ.iಟಿ ನಲ್ಲಿ ಮತ್ತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವೆಬ್‍ಸೈಟ್ hಣಣಠಿ://ಞಡಿeis.ಞಚಿಡಿ.ಟಿiಛಿ.iಟಿ ನಲ್ಲಿ ನೋಡಬಹುದು.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಆಯಾಯ ಜಿಲ್ಲಾ ವ್ಯಾಪ್ತಿಗೆ ಬರುವ ಮೊರಾರ್ಜಿ ದೇಸಾಯಿ/ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಸೆಪ್ಟೆಂಬರ್ 5 ರ ಸಂಜೆ 5.30 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದು.

ಕ್ವಾರಂಟೈನ್ ಸೆಂಟರ್/ಕೊವಿಡ್ ಕೇರ್ ಸೆಂಟರ್‍ಗಾಗಿ ಬಳಸಲಾಗುತ್ತಿರುವ ವಸತಿ ಶಾಲೆಗಳ ಅರ್ಜಿಗಳನ್ನು ಹತ್ತಿರದ ವಸತಿ ಶಾಲೆಗಳಲ್ಲಿ ಹಾಗೂ ಸಂಬಂಧಪಟ್ಟ ಪ್ರಾಂಶುಪಾಲರನ್ನು ಸಂಪರ್ಕಿಸಿ. ಸಾಮಾಜಿಕ ಅಂತರ ಕಾಪಾಡಿಕೊಂಡು, ಮುಖ ಕವಚವನ್ನು ಧರಿಸಿಕೊಂಡು ಬರಲು ಸೂಚಿಸಿದೆ. ಎಲ್ಲಾ ವಿದ್ಯಾರ್ಥಿಗಳು ಹಾಗೂ ಪೋಷಕರು ಈ ಸದಾವಕಾಶವನ್ನು ಉಪಯೋಗಿಸಿಕೊಳ್ಳುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಭಾರತಿ ತಿಳಿಸಿದ್ದಾರೆ.