ಮಡಿಕೇರಿ, ಆ. 28: ಕೊಡಗು ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ. 95 ಮತ್ತು ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲು ಶಾಹೀನ್ ಕಾಲೇಜು, ಬೀದರ್ ತೀರ್ಮಾನಿಸಿದೆ. ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತ ಶಿಕ್ಷಣ ನೀಡಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ತಿಳಿಸಿದ್ದಾರೆ. ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗದಲ್ಲಿ ಉಚಿತ ಶಿಕ್ಷಣ ನೀಡಲು ಕಾಲೇಜು ಮುಂದಾಗಿದೆ. ವಾಣಿಜ್ಯ ಮತ್ತು ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಸಿ.ಎ. ಮತ್ತು ಯು.ಪಿ.ಎ.ಎಸ್ಸಿ. ಪರೀಕ್ಷೆಗಳಿಗೆ ಇಂಟಿಗ್ರೇಟೆಡ್ ತರಬೇತಿ ಕೂಡ ನೀಡುವುದಾಗಿ ಅಬ್ದುಲ್ ಖದೀರ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂ. 8197077682 ಸಂಪರ್ಕಿಸಬಹುದು.