ಕೂಡಿಗೆ, ಆ. 28: ರೈತರು ತಮ್ಮ ಜಮೀನಿನ ಬೆಳೆ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶದ ಸಮರ್ಪಕವಾದ ದಾಖಲೆಗಳನ್ನು ಆಯಾ ಇಲಾಖೆಯವರಿಗೆ ಸಲ್ಲಿಸುವುದರ ಮೂಲಕ ಬೆಳೆ ಪರಿಹಾರ ಯೋಜನೆಯ ಸದುಪಯೋಗಪಡಿಸಿಕೊಳ್ಳಲು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಕರೆ ನೀಡಿದರು.

ಕುಶಾಲನಗರ ಹೋಬಳಿ ವ್ಯಾಪ್ತಿಯ ಕೆಲ ಗ್ರಾಮಗಳಿಗೆ ಶಾಸಕರು ಭೇಟಿ ನೀಡಿದ ಸಂದರ್ಭದಲ್ಲಿ ರೈತರು ಮನವಿ ಪತ್ರವನ್ನು ಸಲ್ಲಿಸಿ ಬೆಳೆ ಹಾಳಾಗಿರುವ ಮಾಹಿತಿಯನ್ನು ತಿಳಿಸಿದಾಗ ಆಯಾ ಗ್ರಾಮ ರೈತರು ಹೋಬಳಿ ವ್ಯಾಪ್ತಿಯಲ್ಲಿರುವ ರೈತ ಸಂಪರ್ಕ ಕೇಂದ್ರ ಮತ್ತು ಸಂಬಂಧಿಸಿದ ಇಲಾಖೆಯ ಹೋಬಳಿ ವ್ಯಾಪ್ತಿಯ ಅಧಿಕಾರಿಗಳಿಗೆ ಭೂಮಿಯ ದಾಖಲಾತಿಯೊಂದಿಗೆ ಅರ್ಜಿ ಸಲ್ಲಿಸುವಂತೆ ತಿಳಿಸಿದರು. ಈಗಾಗಲೇ ಬೆಳೆ ಸಮೀಕ್ಷೆ ಕಾರ್ಯ ನಡೆಯುತ್ತಿದ್ದು, ಅದಕ್ಕೆ ಸಮಗ್ರವಾಗಿ ಮಾಹಿತಿ ನೀಡುವಂತೆ ತಿಳಿಸಿದರು.

ಈ ಸಂದರ್ಭ ವಿವಿಧ ಇಲಾಖೆಯ ಹೋಬಳಿ ವ್ಯಾಪ್ತಿಯ ಅಧಿಕಾರಿಗಳು ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ಸೇರಿದಂತೆ ರೈತರು ಇದ್ದರು.