ಪೆರಾಜೆ, ಆ. 30: ಕೋವಿಡ್-19 ತಡೆಯಲು ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಪೆರಾಜೆ ಇದರ ವತಿಯಿಂದ ಪ್ರೋತ್ಸಾಹ ಧನ ವಿತರಿಸಲಾಯಿತು.

ಪೆರಾಜೆಯ ಆಶಾ ಕಾರ್ಯಕರ್ತೆಯರಾದ ಪೂರ್ಣಾಕ್ಷಿ ಎ.ಟಿ., ದಿವ್ಯಾ ಹೆಚ್.ಯು., ಹೇಮಲತಾ ಆರ್.ಎಸ್. ಮತ್ತು ಜಯಂತಿ ಕೆ.ಎಂ. ಇವರುಗಳಿಗೆ ತಲಾ ರೂ. 3 ಸಾವಿರದಂತೆ ಇತ್ತೀಚೆಗೆ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಪೆÇ್ರೀತ್ಸಾಹ ಧನದ ಚೆಕ್ ವಿತರಿಸಲಾಯಿತು.

ಸಭೆಯಲ್ಲಿ ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಉಪಾಧ್ಯಕ್ಷ ಮೋನಪ್ಪ ನಿಡ್ಯಮಲೆ, ಅಶೋಕ ಪೆರುಮುಂಡ, ಪ್ರಸನ್ನ ನೆಕ್ಕಿಲ, ಗಾಂಧೀಪ್ರಸಾದ್ ಬಂಗಾರಕೋಡಿ, ದೀನರಾಜ ದೊಡ್ಡಡ್ಕ, ಜಯರಾಮ ಪಿ.ಟಿ., ಶೇಷಪ್ಪ ನಾಯ್ಕ ನಿಡ್ಯಮಲೆ, ಪ್ರಮೀಳಾ ಭಾರದ್ವಾಜ್ ಬಂಗಾರಕೋಡಿ, ರೇಣುಕಾ ಕುಂದಲ್ಪಾಡಿ, ಉದಯಕುಮಾರ ಪಿ.ಎ., ಕಿರಣ ಬಂಗಾರಕೋಡಿ ಮತ್ತು ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಕೇಶ್ ಹೊದ್ದೆಟ್ಟಿ ಉಪಸ್ಥಿತರಿದ್ದರು.