ಸೋಮವಾರಪೇಟೆ, ಆ. 30: ಪ.ಪಂ. ವ್ಯಾಪ್ತಿಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಇತರ ಜನಾಂಗ ದವರು ಹಾಗೂ ವಿಶೇಷಚೇತನರ ಕಲ್ಯಾಣಕ್ಕಾಗಿ ಪಟ್ಟಣ ಪಂಚಾಯಿತಿ ನಿಧಿಯಡಿ ಮೀಸಲಿರಿಸಿದ ಶೇ. 24.10, ಶೇ. 7.25 ಹಾಗೂ ಶೇ. 5ರ ಯೋಜನೆಯಡಿ ಅರ್ಜಿ ಆಹ್ವಾನಿಸ ಲಾಗಿದೆ.

ಅನುಮೋದಿತ ಯೋಜನೆಯಡಿ ಸೌಲಭ್ಯ ಪಡೆಯಲಿಚ್ಚಿಸುವ ಫಲಾನುಭವಿ ಗಳು, ದಿನಾಂಕ 28.09.2020ರ ಒಳಗೆ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಜಾತಿ ಮತ್ತು ಆದಾಯ ದೃಢೀಕರಣ ಪತ್ರ, ವಾಸದ ಬಗ್ಗೆ ದಾಖಲಾತಿ, ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್‍ಗಳೊಂದಿಗೆ ಮುಖ್ಯಾಧಿಕಾರಿ ಗಳು, ಪಟ್ಟಣ ಪಂಚಾಯಿತಿ, ಸೋಮವಾರಪೇಟೆ ಇವರಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅವಧಿ ಮೀರಿ ಬಂದ ಅರ್ಜಿ ಗಳನ್ನು ಪರಿಗಣಿಸಲಾಗುವದಿಲ್ಲ. ಪರಿಶಿಷ್ಟ ಪಂಗಡದವರಿಗೆ ಆದ್ಯತೆ ನೀಡಲಾಗುವದು. ಹೆಚ್ಚಿನ ಮಾಹಿತಿ ಯನ್ನು ಕಚೇರಿ ವೇಳೆಯಲ್ಲಿ ಪಡೆಯಬಹುದಾಗಿದೆ ಎಂದು ಪ.ಪಂ. ಪ್ರಕಟಣೆ ತಿಳಿಸಿದೆ.