ಮಡಿಕೇರಿ, ಆ. 30: ಮೀನುಗಾರಿಕೆ ಇಲಾಖೆ ವತಿಯಿಂದ 2020-21ನೇ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ವಿವಿಧ ಕಾರ್ಯಕ್ರಮಗಳ ಸಹಾಯ ಧನಕ್ಕಾಗಿ ಜಿಲ್ಲೆಯ ಫಲಾನುಭವಿ ಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮೀನು ಕೃಷಿ ಕೊಳಗಳ ನಿರ್ಮಾಣ, ಮೀನುಮರಿ ಪಾಲನಾ ಕೊಳಗಳ ನಿರ್ಮಾಣ, ಮೀನು ಮಾರಾಟಕ್ಕಾಗಿ ದ್ವಿಚಕ್ರ, ತ್ರಿಚಕ್ರ ವಾಹನ ಖರೀದಿ, ಬಯೋ ಫ್ಲಾಕ್ ಕೊಳ ನಿರ್ಮಾಣ, ಮೀನುಮರಿ ಉತ್ಪಾದನೆ ಹಾಗೂ ಪಾಲನಾ ಕೇಂದ್ರಗಳ ಸ್ಥಾಪನೆ ಶೈತ್ಯೀಕರಿಸಿದ ವಾಹನಗಳು ಆರ್ಎಎಸ್ ಘಟಕ ಸ್ಥಾಪನೆ, ಶೈತ್ಯಾಗಾರ /ಅಲಂಕಾರಿಕ ಮೀನು ಉತ್ಪಾದನಾ/ಪಾಲನಾ ಘಟಕ ಸ್ಥಾಪನೆ ಹಾಗೂ ಇತರ ಯೋಜನೆಗಳನ್ನು ಪ್ರಾರಂಭಿಸಲು ಸಾಮಾನ್ಯ ಫಲಾನುಭವಿಗಳಿಗೆ ಶೇ. 40 ಸಹಾಯಧನ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳಾ ಫಲಾನುಭವಿಗಳಿಗೆ ಶೇ. 60 ಸಹಾಯಧನ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಸಂಬಂಧಪಟ್ಟ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರು ಶ್ರೇಣಿ-2, ಮಡಿಕೇರಿ-8904809219, ಸೋಮವಾರಪೇಟೆ-8073649362, ವೀರಾಜಪೇಟೆ-9980674821 ನ್ನು ಸಂಪರ್ಕಿಸ ಬಹುದಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನ ಆಗಿದೆ ಎಂದು ಮಡಿಕೇರಿ ಮೀನುಗಾರಿಕೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.