ಸೋಮವಾರಪೇಟೆ, ಆ.30: ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನೋರ್ವನ ಮೇಲೆ ಕತ್ತಿಯಿಂದ ಹಲ್ಲೆ ಮಾಡಿರುವ ಘಟನೆ ಪಟ್ಟಣದ ಸಫಾಲಿ ಬಾರ್ ಆವರಣದಲ್ಲಿ ನಿನ್ನೆ ರಾತ್ರಿ ನಡೆದಿದೆ.

ಪಟ್ಟಣ ಸಮೀಪದ ತಾಕೇರಿ ಗ್ರಾಮ ನಿವಾಸಿ ವಿನಯ್‍ಕುಮಾರ್ ಎಂಬಾತನ ಮೇಲೆ, ಹಾನಗಲ್ಲು ಶೆಟ್ಟಳ್ಳಿ ಗ್ರಾಮದ ಅಭಿ ಮತ್ತು ನಿತ್ಯ ಅವರುಗಳು ಹಳೆ ವೈಷಮ್ಯದಿಂದ ತಗಾದೆ ತೆಗೆದು ಕತ್ತಿಯಿಂದ ಹಲ್ಲೆ ನಡೆಸಿದ್ದಾರೆ.

ಪರಿಣಾಮ ವಿನಯ್‍ಕುಮಾರ್‍ನ ಬೆನ್ನು ಮತ್ತು ಕಾಲಿನ ಭಾಗಕ್ಕೆ ಪೆಟ್ಟಾಗಿದ್ದು, ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕತ್ತಿಯಿಂದ ಹಲ್ಲೆ ನಡೆಸಿದ ಆರೋಪಿಗಳಾದ ಅಭಿ ಮತ್ತು ನಿತ್ಯ ಅವರುಗಳ ವಿರುದ್ಧ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.

ಠಾಣಾಧಿಕಾರಿ ಶಿವಶಂಕರ್ ಅವರು ಸ್ಥಳ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.