ಮಡಿಕೇರಿ, ಆ. 30: ಸರಕಾರಿ ಪ್ರಥಮ ದರ್ಜೆ ಕಾಲೇಜು, ಮಡಿಕೇರಿ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೆಡ್ ರಿಬ್ಬನ್ ಕ್ಲಬ್ ಮತ್ತು ರೆಡ್ ಕ್ರಾಸ್ ಘಟಕ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶÀ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕಾಲೇಜಿನ ಪ್ರಾಂಶುಪಾಲೆ ಚಿತ್ರಾ ವೈ ಅವರು ಧ್ವಜಾರೋಹಣ ನೆರವೇರಿಸಿದರು.

ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ. ದಯಾನಂದ ಕೆ.ಸಿ. ಸ್ವಾಗತಿಸಿ, ವಂದಿಸಿದರು. ಕಾಲೇಜಿನ ಎಲ್ಲಾ ಬೋಧಕ, ಬೋಧಕೇತರ ವರ್ಗದವರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.