ಪೊನ್ನಂಪೇಟೆ, ಆ. 31 : ‘ದಿ. ಎ. ಕೆ. ಸುಬ್ಬಯ್ಯನವರ ಮೊದಲ ವರ್ಷದ ಪುಣ್ಯಸ್ಮರಣೆ’ಯ ಅಂಗವಾಗಿ ಎ.ಕೆ.ಸುಬ್ಬಯ್ಯ-ಪೆÇನ್ನಮ್ಮ ದತ್ತಿ ಮತ್ತು ಶೈಕ್ಷಣಿಕ ಟ್ರಸ್ಟ್ ವತಿಯಿಂದ ಗೋಣಿಕೊಪ್ಪಲಿನ ಸ್ವಾತಂತ್ರ ಹೋರಾಟಗಾರರ ಸ್ಮಾರಕ ಭವನದ ಸಭಾಂಗಣದಲ್ಲಿ ಭಾನುವಾರದಂದು ನಡೆದ 4ನೇ ದಿನದ ದಿನಸಿ ಕಿಟ್‍ಗಳ ವಿತರಣಾ ಕಾರ್ಯಕ್ರಮ ನಡೆಯಿತು. ಈಗಾಗಲೇ ಟ್ರಸ್ಟ್ ವತಿಯಿಂದ ಅರ್ಹ 4,500 ಫಲಾನುಭವಿಗಳಿಗೆ ದಿನಸಿ ಕಿಟ್‍ಗಳನ್ನು ವಿತರಿಸಲಾಗಿದೆ. ಎಂದು ಹಿರಿಯ ವಕೀಲ ಎ. ಎಸ್. ಪೊನ್ನಣ್ಣ ಮಾಹಿತಿ ನೀಡಿದರು. ಉತ್ತರ ಭಾರತದ 350ಕ್ಕೂ ಹೆಚ್ಚು ವಲಸೆ ಕಾರ್ಮಿಕರಿಗೆ ಅವರ ಊರಿಗೆ ಮರಳಲು ಉಚಿತವಾಗಿ ರೈಲ್ವೆ ಟಿಕೆಟ್ ಅನ್ನು ನೀಡಲಾಗಿದೆ. ಕೊರೊನಾ ಸಂಕಷ್ಟದ ಕಾಲದಲ್ಲಿ ಬೆಂಗಳೂರಿನಲ್ಲಿ ಸಿಲುಕಿಕೊಂಡಿದ್ದ ಈಶಾನ್ಯ ಮತ್ತು ಉತ್ತರ ಭಾರತದ ವಿದ್ಯಾರ್ಥಿಗಳಿಗೂ ಲಕ್ಷಾಂತರ ಮೊತ್ತದ ಆರ್ಥಿಕ ನೆರವು ನೀಡಲಾಗಿದೆ. ಎಂದು ಹೇಳಿದರು.

ಸಮಾರಂಭದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರಾದ ತೀತಿರ ಧರ್ಮಜ ಉತ್ತಪ್ಪ, ಪೆÇನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ ನವೀನ್, ಎ. ಕೆ. ಸುಬ್ಬಯ್ಯ ಅವರ ಹಿರಿಯ ಪುತ್ರ ನರೇನ್ ಕಾರ್ಯಪ್ಪ, ಕಾಂಗ್ರೆಸ್ ಮುಖಂಡರಾದ ಕೊಲ್ಲಿರ ಬೋಪಣ್ಣ, ನರೇಂದ್ರ ಕಾಮತ್, ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಗೋಣಿಕೊಪ್ಪಲು ನಗರ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಕೊಳ್ಳಿಮಾಡ ಅಜಿತ್ ಅಯ್ಯಪ್ಪ ವಿಧಾನ ಪರಿಷತ್ ಮಾಜಿ ಸದಸ್ಯ ಚೆಪ್ಪುಡಿರ ಎಸ್. ಅರುಣ್ ಮಾಚಯ್ಯ ಹಾಗೂ ಇತರರು ಇದ್ದರು. 400 ಮಂದಿಗೆ ದಿನಸಿ ಕಿಟ್ ವಿತರಿಸಲಾಯಿತು.