ಮಡಿಕೇರಿ, ಆ. 31: ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕಿನಲ್ಲಿ ಆ.29ರಂದು ಆಡಳಿತ ಮಂಡಳಿ ಸಭೆ ನಡೆಯಿತು. ಇತ್ತೀಚೆಗೆ ನಿಧನರಾದ ಬ್ಯಾಂಕಿನ ಮಾಜಿ ಅಧ್ಯಕ್ಷ ಹಾಗೂ ಹಿರಿಯ ವಕೀಲ ಸಿ.ಜಿ. ಉತ್ತಪ್ಪ ಅವರ ಆತ್ಮಕ್ಕೆ ಶಾಂತಿ ಸಿಗುವಂತೆ ಪ್ರಾರ್ಥಿಸಿ ಸಭೆಯಲ್ಲಿ 2 ನಿಮಿಷಗಳ ಕಾಲ ಮೌನಾಚರಣೆ ನಡೆಯಿತು. ಈ ಸಂದರ್ಭ ಬ್ಯಾಂಕಿನ ಅಧ್ಯಕ್ಷ ಸಿ.ಕೆ. ಬಾಲಕೃಷ್ಣ, ಉಪಾಧ್ಯಕ್ಷ ಬಿ.ಎಂ. ರಾಜೇಶ್ ಹಾಗೂ ನಿರ್ದೇಶಕರು ಹಾಜರಿದ್ದರು.