ಮಡಿಕೇರಿ, ಸೆ. 1: ವೀರಾಜಪೇಟೆ, ವಿದ್ಯುತ್ಕೇಂದ್ರದಿಂದ ಹೊರಹೋಗುವ ಸಿದ್ದಾಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ತಾ. 2 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಗುಹ್ಯ, ಕರಡಿಗೋಡು, ಇಂಜಿಲಗೇರಿ, ಪುಲಿಯೇರಿ, ಮಾಲ್ದಾರೆ, ಪದಗೊಲ್ಲಿ, ಬಾಡಗ, ಬಾಣಾಂಗಾಲ, ಹುಂಡಿ, ಮೇಕೂರು ಹೊಸ್ಕೇರಿ ಹಾಗೂ ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.