ಸೋಮವಾರಪೇಟೆ, ಸೆ.1: ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಪರೀಕ್ಷೆ ಬರೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಐಗೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿ ಕೆ.ಆರ್.ಹರ್ಷಿತಾ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಸನ್ಮಾನಿಸಲಾಯಿತು.

ಶಾಲಾ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕ್ಷೇತ್ರಶಿಕ್ಷಣಾಧಿಕಾರಿ ಪಾಂಡು

ಅವರು ವಿದ್ಯಾರ್ಥಿನಿಯನ್ನು ಸನ್ಮಾನಿಸಿದರು.

ಈ ಸಂದರ್ಭ ವಿದ್ಯಾರ್ಥಿನಿಯ ಪೋಷಕರಾದ ರಾಮಚಂದ್ರ ಆಚಾರ್ಯ ಮತ್ತು ಸರಸ್ವತಿ,

ಪ್ರೌಢ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಧರ್ಮಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ

ಸಂಘದ ಅಧ್ಯಕ್ಷ ಮಂಜುನಾಥ್, ವಿಭಾಗೀಯ ಸಮಿತಿಯ ಸಿ.ಕೆ.ಶಿವಕುಮಾರ್, ಐಗೂರು ಪ್ರೌಢಶಾಲಾ ಮುಖ್ಯ ಶಿಕ್ಷಕ ಎಂ.ಎಂ.ಯಶ್ವಂತ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.