ಮಡಿಕೇರಿ, ಸೆ.1 : ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಾಜಿ ರಾಷ್ಟ್ರಪತಿ ದಿ.ಪ್ರಣಬ್ ಮುಖರ್ಜಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಪ್ರಣಬ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್, ಪ್ರಣಬ್ ಮುಖರ್ಜಿ ಅವರು ಸ್ವಾತಂತ್ರ್ಯ ಹೋರಾಟವನ್ನು ಬಾಲ್ಯದಲ್ಲಿ ಕಂಡವರು. ಸಣ್ಣ ವಯಸ್ಸಿನಲ್ಲೇ ಜನಪ್ರತಿನಿಧಿಯಾಗಿ ರಾಜಕೀಯ ಕ್ಷೇತ್ರದಲ್ಲಿ ಸುದೀರ್ಘ ಅನುಭವ ಹೊಂದಿದ್ದವರು ಎಂದು ಬಣ್ಣಿಸಿದರು. ಮುಖರ್ಜಿ ಅವರು ಶಿಕ್ಷಕರಾಗಿ, ವಕೀಲರಾಗಿ, ಅಂಚೆ ಇಲಾಖೆ ನೌಕರರಾಗಿ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ್ದು, ದೇಶದ ಇತಿಹಾಸದ ಪುಟದಲ್ಲಿ ಉಳಿದುಕೊಂಡಿದ್ದಾರೆ ಎಂದರು.
ವಿಧಾನ ಪರಿಷತ್ ಸದಸೆÀ್ಯ ವೀಣಾಅಚ್ಚಯ್ಯ ಮಾತನಾಡಿ, ಪ್ರಣಬ್ ಮುಖರ್ಜಿ ಅವರು ಕಾಂಗ್ರೆಸ್ ಪಕ್ಷದ ಧೀಮಂತ ನಾಯಕರಾಗಿದ್ದರು. ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿ ದೇಶದ ಬಲವನ್ನು ಹೆಚ್ಚಿಸಿದ ವ್ಯಕ್ತಿಯಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಈ ದೇಶಕ್ಕೆ ಅವರು ನೀಡಿದ ಕೊಡುಗೆ ದೊಡ್ಡದು ಎಂದರು.
ಕಾಂಗ್ರೆಸ್ ಹಿರಿಯ ಮುಖಂಡ ಟಿ.ಪಿ.ರಮೇಶ್, ಕೆಪಿಸಿಸಿ ಪ್ರಮುಖರಾದ ಕೆ.ಪಿ.ಚಂದ್ರಕಲಾ, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ಸಂಯೋಜಕ ಹೆಚ್.ಎಂ.ನಂದಕುಮಾರ್, ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಕೆ.ಎ.ಯಾಕುಬ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಸಂಯೋಜಕ ತೆನ್ನಿರಾ ಮೈನಾ, ಡಿಸಿಸಿ ಸದಸ್ಯ ಪುಷ್ಪ ಪೂಣಚ್ಚ, ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ರಜಾಕ್, ಸಾಮಾಜಿಕ ಜಾಲತಾಣದ ಅಧ್ಯಕ್ಷ ಆರ್.ಪಿ.ಚಂದ್ರಶೇಖರ್, ನಗರ ಮಹಿಳಾ ಅಧ್ಯಕ್ಷರಾದ ಫ್ಯಾನ್ಸಿ ಪಾರ್ವತಿ, ಎಸ್.ಸಿ. ಘಟಕದ ಅಧ್ಯಕ್ಷ ಮುದ್ದುರಾಜು, ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಸದಾಮುದ್ದಪ್ಪ, ನಗರಸಭಾ ಮಾಜಿ ಸದಸ್ಯರುಗಳು ಹಾಜರಿದ್ದರು.
ಸೋಮವಾರಪೇಟೆ : ಮಾಜೀ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನ ಹಿನ್ನೆಲೆ ಇಲ್ಲಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್, ಕಾರ್ಯದರ್ಶಿ ಸುನಿಲ್, ಮಹಿಳಾ ಘಟಕದ ಅಧ್ಯಕ್ಷೆ ಶೀಲಾ ಡಿಸೋಜಾ, ಮುಖಂಡರಾದ ಬಿ.ಈ. ಜಯೇಂದ್ರ, ಬಸವರಾಜು ಸೇರಿದಂತೆ ಇತರರು ಪಾಲ್ಗೊಂಡಿದ್ದರು.
ಕುಶಾಲನಗರ : ಮಾಜಿ ರಾಷ್ಟ್ರಪÀತಿ ಪ್ರಣಬ್ ಮುಖರ್ಜಿ ನಿಧನದ ಹಿನ್ನೆಲೆಯಲ್ಲಿ ಕುಶಾಲನಗರದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಶ್ರದ್ಧಾಂಜಲಿ ಸಲ್ಲಿಸಿದರು.
ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪ್ರಣಬ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮೌನಚಾರಣೆ ಮೂಲಕ ಆತ್ಮಕ್ಕೆ ಶಾಂತಿ ಕೋರಲಾಯಿತು.
ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಸ್.ಅನಂತಕುಮಾರ್, ಕೆಪಿಸಿಸಿ ಸಂಯೋಜಕ ಪ್ರದೀಪ್ ರೈ ಪಾಂಬಾರು, ಇಂಟೆಕ್ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ ಮಾತನಾಡಿದರು.
ಪಕ್ಷದ ಕಾರ್ಮಿಕ ಘಟಕದ ರಾಜ್ಯ ಕಾರ್ಯದರ್ಶಿ ಅಜ್ಜಳ್ಳಿ ರವಿ, ಕುಶಾಲನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ಶರೀಫ್ ಇಬ್ರಾಹಿಂ, ಇಂಟೆಕ್ ಜಿಲ್ಲಾ ಘಟಕ ಅಧ್ಯಕ್ಷ ಗೋವಿಂದರಾಜ್ದಾಸ್, ಬ್ಲಾಕ್ ಯೂತ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ದೇವಪ್ಪ, ವಿವಿಧ ಘಟಕಗಳ ಪ್ರಮುಖರಾದ ತ್ರಿನೇಶ್, ಜನಾರ್ಧನ್, ಗೀತಾ ಮತ್ತಿತರರು ಇದ್ದರು.
*ಕೊಡ್ಲಿಪೇಟೆ : ಮಾಜೀ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಕೊಡ್ಲಿಪೇಟೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಕೊಡ್ಲಿಪೇಟೆಯ ಬಸವೇಶ್ವರ ವೃತ್ತದಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಪಿ.ಎಲ್.ಡಿ. ಬ್ಯಾಂಕ್ ನಿರ್ದೇಶಕ ಭಗವಾನ್ ಗೌಡ ಹಾಗೂ ಸಾಮಾಜಿಕ ಕಾರ್ಯಕರ್ತ ಇಂದ್ರೋಜಿ ರಾವ್ ಅವರುಗಳು, ಮಾಜೀ ರಾಷ್ಟ್ರಪತಿಗಳ ಸಾಮಾಜಿಕ ಸೇವೆಯನ್ನು ಸ್ಮರಿಸಿದರು.
ಈ ಸಂದರ್ಭ ಕೊಡ್ಲಿಪೇಟೆ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಬಿ.ಕೆ.ಯತೀಶ್, ವಿವಿಧ ಸಂಘ ಸಂಸ್ಥೆಗಳ ಪ್ರಮುಖರಾದ ಮೋಕ್ಷಿತ್ ಕ್ಯಾತೆ, ಕೆ.ಎಸ್.ನಾಗರಾಜ್, ಮಳಲಿ ನಾಗೇಶ್, ಬಿ.ಯು.ಲತೀಫ್, ರಫೀಕ್, ಪ್ರವೀಣ್, ಮುರಳಿ, ಸವಿತಾ ಸಮಾಜದ ಗಣೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.