ಮಡಿಕೇರಿ, ಸೆ. 1: ಅಬಕಾರಿ ಆಯುಕ್ತರು, ಕರ್ನಾಟಕ ರಾಜ್ಯ, ಬೆಂಗಳೂರು ಮತ್ತು ಅಬಕಾರಿ ಜಂಟಿ ಆಯುಕ್ತರು, ಮಂಗಳೂರು ವಿಭಾಗ ಅವರುಗಳ ನಿರ್ದೇಶನದಂತೆ ಕೊಡಗು ಜಿಲ್ಲೆಯಲ್ಲಿ ಜಿಲ್ಲಾದ್ಯಂತ ಅಬಕಾರಿ ಅಕ್ರಮಗಳನ್ನು ನಿಯಂತ್ರಿಸುವ ಸಂಬಂಧ ಟೋಲ್ ಫ್ರೀ ದೂರವಾಣಿ ಸಂಖ್ಯೆ 08272-229110ವನ್ನು ಈ ಕಚೇರಿಯಲ್ಲಿ ಅಳವಡಿಸಿ, ಕಂಟ್ರೋಲ್ ರೂಂ ಮಾಡಲಾಗಿದೆ. ಸಾರ್ವಜನಿಕರು ಅಬಕಾರಿ ಇಲಾಖೆಗೆ ಸಂಬಂಧಿಸಿದ ದೂರುಗಳನ್ನು ದೂರವಾಣಿ ಸಂಖ್ಯೆಗೆ 24x7 ಸಲ್ಲಿಸಲು ಹಾಗೂ ಜಿಲ್ಲೆಯಲ್ಲಿ ಅಬಕಾರಿ ಅಕ್ರಮಗಳನ್ನು ತಡೆಗಟ್ಟಲು ಸಹಕರಿಸುವಂತೆ ಕೊಡಗು ಜಿಲ್ಲಾ ಅಬಕಾರಿ ಉಪ ಆಯುಕ್ತರು ಕೋರಿದ್ದಾರೆ.