ಕುಶಾಲನಗರ, ಸೆ.1: ಕುಶಾಲನಗರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಂಘದ ಬಡ ಸದಸ್ಯರ ಶಾಲಾ ಮಕ್ಕಳಿಗೆ ಉಚಿತವಾಗಿ ಲೇಖನ ಸಾಮಗ್ರಿಗಳ ವಿತರಣೆ ಕಾರ್ಯ ತಾ. 2ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.
ಕಚೇರಿಯ ಆವರಣದಲ್ಲಿ ಸಾಂಕೇತಿಕವಾಗಿ ಮಕ್ಕಳಿಗೆ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಶಕ್ತಿ ಪತ್ರಿಕೆ ಸಂಪಾದಕ ಜಿ.ಚಿದ್ವಿಲಾಸ್, ಕೊಡಗು ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಬಾಂಡ್ ಗಣಪತಿ, ಸಹಕಾರ ಇಲಾಖೆ ಉಪನಿಬಂಧಕ ಸಲೀಂ ಪಾಲ್ಗೊಳ್ಳುವರು ಎಂದು ಸಂಘದ ಪ್ರಕಟಣೆ ತಿಳಿಸಿದೆ.