ಮಡಿಕೇರಿ, ಸೆ. 1: ಕಾನೂನು ಮಾಪನ ಶಾಸ್ತ್ರ ಇಲಾಖೆ, ಮಡಿಕೇರಿ ಇವರ ವತಿಯಿಂದ ತಾತ್ಕಾಲಿಕ ಸತ್ಯಾಪನೆ ಮುದ್ರೆ ಶಿಬಿರವನ್ನು ತಾ. 3 ರಿಂದ ತಾ. 17 ರವರೆಗೆ ವಿಎಸ್‍ಎಸ್‍ಎನ್ ಬ್ಯಾಂಕ್, ಸುಂಟಿಕೊಪ್ಪದಲ್ಲಿ ಏರ್ಪಡಿಸಲಾಗಿದೆ. ಸಾರ್ವಜನಿಕರು ತಮ್ಮಲ್ಲಿ ಉಪಯೋಗಿಸುವ ಅಳತೆ, ತೂಕ ಮತ್ತು ತೂಕದ ಸಾಧನಗಳನ್ನು ಹಾಜರುಪಡಿಸಿ ಸತ್ಯಾಪನೆ ಮುದ್ರೆ ಮಾಡಿಸಲು ಮಡಿಕೇರಿ ಕಾನೂನು ಮಾಪನ ಶಾಸ್ತ್ರ ಇಲಾಖೆಯ ನಿರೀಕ್ಷಕರು ತಿಳಿಸಿದ್ದಾರೆ.