ಕುಶಾಲನಗರ, ಸೆ. 1: ಸೋಮವಾರಪೇಟೆ ತಾಲೂಕು ಶರಣ ಸಾಹಿತ್ಯ ಪರಿಷತ್ ಘಟಕ, ಕುಶಾಲನಗರದ ವೀರಶೈವ ಸಮಾಜ ಹಾಗೂ ಅಕ್ಕನಬಳಗದ ಆಶ್ರಯದಲ್ಲಿ ವಚನ ದಿನ ಹಾಗೂ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಜಯಂತೋತ್ಸವ ಕಾರ್ಯಕ್ರಮ ನಡೆಯಿತು.
ಕುಶಾಲನಗರದ ಬಸವೇಶ್ವರ ದೇವಾಲಯದಲ್ಲಿ ಶರಣ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಪಿ. ಮಹಾದೇವಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶರಾದ ಸದಾಶಿವ ಸ್ವಾಮೀಜಿಗಳು ಉದ್ಘಾಟಿಸಿದರು.
ಬಸವಣ್ಣ ಹಾಗೂ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮಿಸಲಾಯಿತು. ಇದೇ ಸಂದರ್ಭ ಸದಾಶಿವ ಸ್ವಾಮೀಜಿ ಆಶೀರ್ವಚನ ನೀಡಿದರು.
ಅಕ್ಕನ ಬಳಗದ ಸದಸ್ಯರು ಪ್ರಾರ್ಥನೆ ನೆರವೇರಿಸಿದರು. ಸುಂಟಿಕೊಪ್ಪದ ಉಪನ್ಯಾಸಕಿ ಸುಕನ್ಯ ಪ್ರಕಾಶ್ ವಚನ ದಿನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು.
ಮುಖ್ಯ ಅತಿಥಿಗಳಾಗಿ ವೀರಶೈವ ಮಹಾಸಭಾದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಹೆಚ್.ವಿ. ಶಿವಪ್ಪ, ವೀರಶೈವ ಲಿಂಗಾಯತ ನೌಕರರ ಸಂಘದ ಅಧ್ಯಕ್ಷ ನಂದೀಶ್, ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಕಾರ್ಯದರ್ಶಿ ಸೋಮಪ್ಪ, ಕುಶಾಲನಗರದ ಅಕ್ಕನ ಬಳಗದ ಅಧ್ಯಕ್ಷೆ ಕಮಲ ಉದಯ್ ಕುಮಾರ್, ಕುಶಾಲನಗರದ ಕದಳಿ ವೇದಿಕೆ ಅಧ್ಯಕ್ಷೆ ಲೇಖನ ಧಮೇರ್ಂದ್ರ, ಶಸಾಪನ ತಾಲೂಕು ಘಟಕದ ಕಾರ್ಯದರ್ಶಿ ಹೆಚ್.ಬಿ. ಉದಯ್ ಕುಮಾರ್, ವೀರಶೈವ ಮಹಾಸಭಾದ ಕೊಡಗು ಜಿಲ್ಲಾ ಘಟಕದ ಕಾರ್ಯದರ್ಶಿ ಶಾಂಭಶಿವ ಮೂರ್ತಿ, ಪ್ರಮುಖರಾದ ಬಸವರಾಜು ಮತ್ತಿತರರು ಇದ್ದರು.