ಮಡಿಕೇರಿ, ಸೆ.2 : ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿಗೆ 3 ಜನ ಸಹ ಸದಸ್ಯರನ್ನು ಆಯ್ಕೆ ಮಾಡಲಾಗಿದೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಚಿನ್ನಸ್ವಾಮಿ ತಿಳಿಸಿದ್ದಾರೆ.
ಸೆಪ್ಟೆಂಬರ್ 1 ರಂದು ಕರ್ನಾಟಕ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕøತಿ ಅಕಾಡೆಮಿಯ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ಅವರ ಅಧ್ಯಕ್ಷತೆಯಲ್ಲಿ ನಡೆದ ದ್ವಿತೀಯ ಸರ್ವ ಸದಸ್ಯರ ಸಭೆಯಲ್ಲಿ ಮಂಗಳೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಪುರುಷೋತ್ತಮ ಕೆ.ವಿ, ಮಂಗಳೂರಿನ ಬ್ಯಾಂಕ್ ಆಫ್ ಬರೋಡ ಉದ್ಯೋಗಿ ಭರತೇಶ್ ಎ.ಬಿ ಮತ್ತು ಮಡಿಕೇರಿ ತಾಲೂಕಿನ ಪೆರಾಜೆ ಗ್ರಾಮದ, ‘ಶಕ್ತಿ’ ವರದಿಗಾರರಾಗಿರುವ ಕಿರಣ್ ಕುಂಬಳಚೇರಿ ಇವರುಗಳನ್ನು ಸರ್ವಾನುಮತದಿಂದ ಸಹ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು ಎಂದು ಅವರು ತಿಳಿಸಿದ್ದಾರೆ.