ಮಡಿಕೇರಿ, ಸೆ. 2: ಕುಶಾಲನಗರ, ವಿದ್ಯುತ್ ಕೇಂದ್ರದಿಂದ ಹೊರ ಹೋಗುವ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಾಗು ವುದರಿಂದ ತಾ. 3 ರಂದು (ಇಂದು) ಬೆಳಿಗ್ಗೆ 10 ರಿಂದ ಸಂಜೆ 2 ಗಂಟೆಯ ವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸ ಲಾಗುವುದು. ಗುಡ್ಡೆಹೊಸೂರು, ನಂಜರಾಯಪಟ್ಟಣ ಹಾಗೂ ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಇಲಾಖೆ ಕೋರಿದೆ.