ಗುಂಡು ಹಾರಿಸಿಕೊಂಡ ಐಪಿಎಸ್ ಅಧಿಕಾರಿ
ಬೆಂಗಳೂರು, ಸೆ. 2: ಹಿರಿಯ ಐಪಿಎಸ್ ಅಧಿಕಾರಿ ಆರ್.ಪಿ. ಶರ್ಮಾ ಅವರಿಗೆ ಗುಂಡೇಟು ತಗಲಿದೆ. ಸರ್ವೀಸ್ ರಿವಾಲ್ವರ್‍ನಿಂದ ಕುತ್ತಿಗೆ ಭಾಗಕ್ಕೆ ಎರಡು ಬಾರಿ ಸ್ವತಃ ಗುಂಡು ಹಾರಿಸಿಕೊಂಡಿರುವ ಅಧಿಕಾರಿ ಇದೀಗ ಚಿಂತಾಜನಕ ಸ್ಥಿತಿಯಲ್ಲಿ ಹೆಬ್ಬಾಳದಲ್ಲಿರುವ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಕೊತ್ತನೂರು ನಿವಾಸದಲ್ಲಿ ಘಟನೆ ನಡೆದಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಬೆಂಗಳೂರು ಪೆÇಲೀಸ್ ಕಮಿಷÀನರ್ ಕಮಲ್ ಪಂತ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ರಾಜ್ಯದಲ್ಲಿ ಕೋವಿಡ್‍ಗೆ 113 ಬಲಿ
ಬೆಂಗಳೂರು, ಸೆ. 2: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಬುಧವಾರ ಸಹ ಬರೋಬ್ಬರಿ 9860 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,61341ಕ್ಕೆ ಏರಿಕೆಯಾಗಿದೆ. ಇನ್ನು ರಾಜ್ಯದಲ್ಲಿ ಇಂದು 113 ಮಂದಿ ಸೋಂಕಿಗೆÉ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5950ಕ್ಕೆ ಏರಿಕೆಯಾಗಿದೆ. ಕೊರೊನಾ ವೈರಸ್‍ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 32 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 113 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 3420 ಹೊಸ ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು 9850 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇಂದ್ರಜಿತ್ ವಿರುದ್ಧ ಮುತಾಲಿಕ್ ವಾಗ್ಧಾಳಿ
ಹಾವೇರಿ, ಸೆ. 2: ಚಂದನವನದಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಧ್ವನಿಯೆತ್ತಿರುವ ನಿರ್ದೇಶಕ ಇಂದ್ರಜಿತ್ ವಿರುದ್ಧ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಟೀಕಿಸಿದ್ದಾರೆ. ಚಿತ್ರರಂಗ, ರಾಜಕಾರಣಿಗಳ ಮಕ್ಕಳ ಡ್ರಗ್ ದಂಧೆ ಬಗ್ಗೆ ಮಾತನಾಡುತ್ತಿರುವ ಇಂದ್ರಜಿತ್, ಅವರ ಅಕ್ಕ ಗೌರಿಲಂಕೇಶ್ ಕೂಡ ಡ್ರಗ್ ಎಡಿಟ್ ಆಗಿದ್ದರು. ಆಗ ಏಕೆ ಈ ಬಗ್ಗೆ ಪ್ರಶ್ನಿಸಲಿಲ್ಲ. ಆಕೆಯನ್ನು ಏಕೆ ಸುಧಾರಿಸಲಿಲ್ಲ ಎಂದು ಪ್ರಶ್ನಿಸಿದ್ದಾರೆ. ಸ್ವಂತ ಅಕ್ಕಳನ್ನು ಸುಧಾರಿಸದ ಇಂದ್ರಜಿತ್ ಲಂಕೇಶ್ ಇಂದು ಚಿತ್ರರಂಗದ ನಟನಟಿಯರ ಮೇಲೆ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದಿದ್ದಾರೆ. ಇಂದ್ರಜಿತ್ ಲಂಕೇಶ್ ಅವರು ಕನ್ನಡ ಚಿತ್ರರಂಗದ ಕೆಲ ನಟ-ನಟಿಯರು ಡ್ರಗ್ಸ್ ಮಾಫಿಯಾದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ್ದರು. ಅಲ್ಲದೆ ಈ ಸಂಬಂಧ ಸಿಸಿಬಿ ಪೆÇಲೀಸರಿಗೆ ಮಾಹಿತಿಯನ್ನು ಒದಗಿಸಿದ್ದರು.
119 ಮೊಬೈಲ್ ಅಪ್ಲಿಕೇಶನ್‍ಗಳು ನಿಷೇಧ
ನವದೆಹಲಿ, ಸೆ. 2: ಕೇಂದ್ರ ಸರ್ಕಾರ ದೇಶದಲ್ಲಿ ಮತ್ತಷ್ಟು ಚೀನೀ ಆ್ಯಪ್‍ಗಳನ್ನು ಬ್ಯಾನ್ ಮಾಡಿದ್ದು, ಪಬ್‍ಜಿ ಸೇರಿ 119 ಮೊಬೈಲ್ ಅಪ್ಲಿಕೇಶನ್‍ಗಳನ್ನು ನಿಷೇಧಿಸಿ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ ಬುಧವಾರ ಆದೇಶ ಹೊರಡಿಸಿದೆ.
ಗಲಭೆ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ
ಬೆಂಗಳೂರು, ಸೆ. 2: ಬೆಂಗಳೂರು ಗಲಭೆ ಪ್ರಕರಣದಲ್ಲಿ ಭಾಗಿಯಾಗಿದ್ದ ಎಲ್ಲಾ ತಪ್ಪಿತಸ್ಥರಿಗೂ ಕಠಿಣ ಶಿಕ್ಷೆಯಾಗಬೇಕು ಎಂದು ಮಾಜಿ ಸಿಎಂ ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಗಲಭೆ ನಡೆದಿದ್ದ ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿಗಳಿಗೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು, ಅಧಿಕಾರಿಗಳಿಂದ ಪ್ರಕರಣದ ಮಾಹಿತಿ ಕಲೆಹಾಕಿದರು. ಈ ವೇಳೆ ಸಂಪೂರ್ಣ ಪ್ರಕರಣದ ಪೂರ್ವಾಪರ ಪರಿಶೀಲಿಸಿದ ಅವರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಸಿಹಿದರು. ಅಂತೆಯೇ ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ಡಿ.ಜೆ. ಹಳ್ಳಿಯಲ್ಲಿ ನಡೆದ ಗಲಭೆ ಸಂದರ್ಭದಲ್ಲಿ ಹಾನಿಗೊಳಗಾಗಿದ್ದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ ಹಾಗೂ ಪೆÇಲೀಸ್ ಠಾಣೆಗೆ ಭೇಟಿನೀಡಿ, ಡಿಸಿಪಿ ಶರಣಪ್ಪ ಅವರಿಂದ ಘಟನೆಯ ಮಾಹಿತಿ ಪಡೆದುಕೊಂಡೆ. ಈ ವೇಳೆ ಶಾಸಕರಾದ ರಿಜ್ವಾನ್ ಅರ್ಷದ್, ನಸೀರ್ ಅಹ್ಮದ್, ವೆಂಕಟರಮಣಪ್ಪ ಅವರು ಸೇರಿದಂತೆ ಹಲವರು ಜೊತೆಗಿದ್ದರು.
ಪೊಲೀಸರಿಗೆ ಗೊತ್ತಿಲ್ಲದೆ ದಂಧೆ ನಡೆಯಲ್ಲ
ಮೈಸೂರು, ಸೆ. 2: ಪೆÇಲೀಸರಿಗೆ ಗೊತ್ತಿಲ್ಲದೆ ಡ್ರಗ್ಸ್ ಹಾಗೂ ಕಳ್ಳತನ ದಂಧೆಗಳು ನಡೆಯುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಹೇಳಿದ್ದಾರೆ. ಇದು ನಿನ್ನೆ ಮೊನ್ನೆಯ ಪ್ರಕರಣ ಅಲ್ಲ ಇದು, ನಮಗೆ ಅರಿವು ಇಲ್ಲದೆ ಡ್ರಗ್ಸನ್ನು ನಾವೇ ಬೆಳೆಸಿಕೊಂಡು ಬಂದಿದ್ದೇವೆ. ಹಲವು ಹಂತದಲ್ಲಿ ಬೆಳೆದು ಸೆಲೆಬ್ರಿಟಿಗಳ ಹಂತಕ್ಕೆ ಬಂದು ನಿಂತಿದೆ. ಪೆÇಲೀಸ್ ಇಲಾಖೆ ಮಾಡಬೇಕಿದ್ದ ಕೆಲಸವನ್ನು ಚಿತ್ರ ನಿರ್ದೇಶಕ ಮಾಡಿದ್ದಾನೆ ಎಂದು ಹೆಚ್. ವಿಶ್ವನಾಥ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಜಾಲ ವ್ಯವಸ್ಥಿತವಾಗಿ ಬಹಳ ವರ್ಷದಿಂದ ನಡೆದು ಬರ್ತಿದೆ. ಯಾವುದೇ ಸರ್ಕಾರವನ್ನ ಬೊಟ್ಟು ಮಾಡಬಾರದು ಎಂದರು. ಕೋವಿಡ್ ಹೇಗೆ ಜಗತ್ತಿಗೆ ಆವರಿಸಿದೆ ಅದೇ ರೀತಿ ಡ್ರಗ್ಸ್ ಕೂಡ ಗೊತ್ತಿಲ್ಲದಂತೆ ರಾಜ್ಯವನ್ನು ಆವರಿಸಿದೆ. ಯುವಕ, ಯುವತಿಯರು ತಮಗೆ ಅರಿವಿಲ್ಲದೆ ಈ ಪಾಪ ಕೂಪಕ್ಕೆ ಬಲಿಯಾಗುತ್ತಿದ್ದಾರೆ ಎಂದರು.