ಮಡಿಕೇರಿ, ಸೆ. 2: ಜಿಲ್ಲೆಯಲ್ಲಿ ಮುಂಗಾರು ಮಳೆ ಮತ್ತೆ ಚುರುಕಾಗಿದ್ದು, ಜಿಲ್ಲೆಯಲ್ಲಿ ವ್ಯಾಪಕವಾಗಿ ಗುಡುಗು ಸಹಿತ ಸಾಧಾರಣದಿಂದ ಭಾರೀ ಮಳೆಯಾಗುವ ಸಂಭವ ಇರುತ್ತದೆ.

ಜಿಲ್ಲೆ ತಾ. 2ರಿಂದ ತಾ. 4ರ ಬೆಳಿಗ್ಗೆ 8.30ರವರೆಗೆ ಆರೆಂಜ್ ಅಲರ್ಟ್‍ನ್ನು ಭಾರತೀಯ ಹವಾಮಾನ ಇಲಾಖೆ ಘೋಷಿಸಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದಿರಲು ಜಿಲ್ಲಾಡಳಿತ ಮನವಿ ಮಾಡಿದೆ.

ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ 24x7 ಕಂಟ್ರೋಲ್ ರೂಂ. 08272-221077, ವಾಟ್ಸಾಆ್ಯಫ್ ನಂ. 8550001077 ದೂರವಾಣಿಯನ್ನು ಸಂಪರ್ಕಿಸಬಹುದಾಗಿದೆ.