ಕೂಡಿಗೆ, ಸೆ. 2: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರಂಗಿ ಸಮೀಪದ ಮಾವಿನ ಗ್ರಾಮದ ನಿವಾಸಿ ರಾಮಕೃಷ್ಣ ಎಂಬವರ ಮನೆ ಹಿಂದಿನ ಕೊಟ್ಟಿಗೆಯಲ್ಲಿ ಕಟ್ಟಿದ 40 ಸಾವಿರಕ್ಕೂ ಹೆಚ್ಚು ಬೆಲೆ ಬಾಳುವ ಎತ್ತುಗಳನ್ನು ಕಳವು ಮಾಡಲಾಗಿದೆ.

ಕೊಟ್ಟಿಗೆಯ ಹಿಂದಿನ ತಂತಿ ಬೇಲಿಯನ್ನು ಮುರಿದು ಎತ್ತುಗಳನ್ನು ಕಳವು ಮಾಡಲಾಗಿದೆ. ಹಾರಂಗಿ ಚಿಕ್ಕತ್ತೂರು ದೊಡ್ಡತ್ತೂರು ಹುದುಗೂರು ಯಡವನಾಡು ಕಾಳಿದೇವನ ಬಸವನತ್ತೂರು ಗ್ರಾಮಗಳ ವ್ಯಾಪ್ತಿಯಲ್ಲಿ ಕಳೆದ ಒಂದು ವರ್ಷದಿಂದ ರಾತ್ರಿ ಸಮಯದಲ್ಲಿ ಜಾನುವಾರು ಕಳವು ಪ್ರಕರಣಗಳು ನಡೆಯುತ್ತಲೇ ಇದೆ. ಈ ಬಗ್ಗೆ ರೈತರು ಆತಂಕ ವ್ಯಕ್ತಪಡಿಸಿದ್ದಾರೆ. ಕುಶಾಲನಗರ ಗ್ರಾಮಾಂತರ ಪೆÇೀಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.