ಮಡಿಕೇರಿ, ಸೆ. 4 : ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ 2020-21ನೇ ಸಾಲಿನಲ್ಲಿ ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರಿಗೆ ತಾ. 5 ರಂದು (ಇಂದು) ಬೆಳಿಗ್ಗೆ 9.30 ಗಂಟೆಗೆ ನಗರದ ಸಂತ ಮೈಕಲರ ಪ್ರೌಢಶಾಲೆಯಲ್ಲಿ ಪ್ರಶಸ್ತಿ ಸಮಾರಂಭ ನಡೆಯಲಿದ್ದು, ಪ್ರಶಸ್ತಿಯನ್ನು ಸ್ವೀಕರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.