*ಗೋಣಿಕೊಪ್ಪಲು, ಸೆ. 4 : ರಾಜ್ಯ ಕೃಷಿ ಮಾರಾಟ ಮಂಡಳಿಯ ಸದಸ್ಯರಾಗಿ ಗೋಣಿಕೊಪ್ಪಲು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಅಜ್ಜಿಕಟ್ಟೀರ ಎಂ.ಮುತ್ತಪ್ಪ ಆಯ್ಕೆಯಾಗಿದ್ದಾರೆ.

ಈಚಿಗೆ ನಡೆದ ಚುನಾವಣೆಯಲ್ಲಿ ಕೊಡಗು ಜಿಲ್ಲೆಯಿಂದ ಮುತ್ತಪ್ಪ ಆಯ್ಕೆಯಾಗಿದ್ದಾರೆ ಎಂದು ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರೂ ಆದ ಚುನಾವಣಾಧಿಕಾರಿ ಕೆ.ಸಿ. ಸಂದೇಶ್ ತಿಳಿಸಿದ್ದಾರೆ.