ಮಡಿಕೇರಿ, ಸೆ. 4 : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷರಾಗಿ ಕೆ.ಇ.ಮ್ಯಾಥ್ಯು ಆಯ್ಕೆಯಾಗಿದ್ದಾರೆ.
ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ಎಸ್.ಎಸ್. ಪ್ರಕಾಶಮ್ ಅವರು ಆದೇಶ ಪತ್ರವನ್ನು ಹಸ್ತಾಂತರಿಸಿದ್ದಾರೆ.
ಐಎನ್ಟಿಯುಸಿ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ, ಪ್ರಧಾನ ಕಾರ್ಯದರ್ಶಿ ನಾಪಂಡ ಮುದ್ದಪ್ಪ, ಡಿಸಿಸಿ ಮಾಜಿ ಸದಸ್ಯ ಸುನೀಲ್ ಸುಬ್ಬಪ್ಪ ಹಾಗೂ ಕಾಂಗ್ರೆಸ್ ಪ್ರಮುಖ ಕಡ್ಲೆರ ಗಣೇಶ್ ಹಾಜರಿದ್ದರು.