ನಾಪೆÇೀಕ್ಲು, ಸೆ. 4: ಸಮೀಪದ ಬಲ್ಲಮಾವಟಿ ಗ್ರಾಮದಲ್ಲಿ ನಿರ್ಮಿಸಲಾದ ಬಿಎಸ್‍ಎನ್‍ಎಲ್ ಟವರ್ ಕಳೆದ ಎರಡು ತಿಂಗಳಿನಿಂದ ಕಾರ್ಯನಿರ್ವಹಿಸುತ್ತಿಲ್ಲ. ಇದರಿಂದಾಗಿ ಇದರ ವ್ಯಾಪ್ತಿಗೆ ಒಳಪಡುವ ಗ್ರಾಮದ ಜನತೆ ಹೆಚ್ಚಿನ ತೊಂದರೆ ಅನುಭವಿಸುತ್ತಿದ್ದಾರೆ. ಕೋವಿಡ್ 19 ಕಾರಣದಿಂದ ಈಗ ವಿದ್ಯಾರ್ಥಿಗಳಿಗೆ ಆನ್‍ಲೈನ್ ತರಗತಿಗಳು ಆರಂಭಗೊಂಡಿದ್ದು, ನೆಟ್‍ವರ್ಕ್ ಸಮಸ್ಯೆಯಿಂದ ಇದರಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ಕಷ್ಟ ಸುಖಗಳಿಗೆ ಸಂದೇಶ ರವಾನಿಸಲು ಕೂಡ ಸಮಸ್ಯೆ ಉಂಟಾಗಿದೆ. ಸಂಬಂಧಿಸಿದ ಅಧಿಕಾರಿಗಳು ಇದನ್ನು ಕೂಡಲೇ ದುರಸ್ತಿಗೊಳಿಸಬೇಕು. ತಪ್ಪಿದ್ದಲ್ಲಿ ಪ್ರತಿಭಟನೆ ನಡೆಸಲಾಗುವದು ಎಂದು ಬಲ್ಲತ್‍ನಾಡ್ ಕೊಡವ ಫಾರ್ಮರ್ಸ್ ಸ್ಪೋಟ್ರ್ಸ್ ಮತ್ತು ರಿಕ್ರಿಯೇಶನ್ ಅಸೋಸಿಯೇಷನ್ ತಿಳಿಸಿದೆ.