ಮಡಿಕೇರಿ, ಸೆ. 4: ಅಬಕಾರಿ ಆಯುಕ್ತರು, ಕರ್ನಾಟಕ ರಾಜ್ಯ, ಬೆಂಗಳೂರು ಮತ್ತು ಅಬಕಾರಿ ಜಂಟಿ ಆಯುಕ್ತರು, ಮಂಗಳೂರು ವಿಭಾಗ ಇವರುಗಳ ನಿರ್ದೇಶನದಂತೆ ಕೊಡಗು ಜಿಲ್ಲೆಯಲ್ಲಿ ಅಬಕಾರಿ ಅಕ್ರಮಗಳನ್ನು ನಿಯಂತ್ರಿಸುವ ಸಂಬಂಧ ಟೋಲ್ ಫ್ರೀ ದೂರವಾಣಿ ಸಂಖ್ಯೆ: 08272-229110 ವನ್ನು ಕಚೇರಿಯಲ್ಲಿ ಅಳವಡಿಸಿ, ಕಂಟ್ರೋಲ್ ರೂಂ ಮಾಡಲಾಗಿರುತ್ತದೆ. ಸಾರ್ವಜನಿಕರು ಅಬಕಾರಿ ಇಲಾಖೆಗೆ ಸಂಬಂಧಿಸಿದ ದೂರುಗಳನ್ನು ಈ ದೂರವಾಣಿ ಸಂಖ್ಯೆಗೆ 24x7 ಸಲ್ಲಿಸಲು ಹಾಗೂ ಜಿಲ್ಲೆಯಲ್ಲಿ ಅಬಕಾರಿ ಅಕ್ರಮಗಳನ್ನು ತಡೆಗಟ್ಟಲು ಸಹಕರಿಸುವಂತೆ ಅಬಕಾರಿ ಉಪ ಆಯುಕ್ತರು ಕೋರಿದ್ದಾರೆ.