ಸೋಮವಾರಪೇಟೆ, ಸೆ. 4: ಮಕ್ಕಳ ಸಹಾಯವಾಣಿ ಕೇಂದ್ರದ ವತಿಯಿಂದ ಸಮೀಪದ ತಾಲೂಕಿನ ನಿಡ್ತ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾಗಮದಲ್ಲಿರುವ ವಿದ್ಯಾರ್ಥಿಗಳಿಗೆ ಮಕ್ಕಳ ಸಹಾಯವಾಣಿ ಕೇಂದ್ರದ ವತಿಯಿಂದ ಜಾಗೃತಿ ಕಾರ್ಯಕ್ರಮ ನಡೆಯಿತು. ಮಕ್ಕಳ ಸಹಾಯವಾಣಿ ಕೇಂದ್ರದ ಬಿ.ಕೆ. ಕುಮಾರಿ, ಯೋಗೇಶ್ ಅವರುಗಳು ಮಾತನಾಡಿ, ಕೋವಿಡ್ ವೈರಸ್ ಬಗ್ಗೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು, ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಶಾಲಾ ಶಿಕ್ಷಕ ವಿಶ್ವನಾಥ್ ಉಪಸ್ಥಿತರಿದ್ದರು.