ಗೋಣಿಕೊಪ್ಪಲು, ಸೆ. 4: ಈ ಬಾರಿಯ ಮಳೆ ಹಾಗೂ ಗಾಳಿಯಿಂದ ರೈತರ ಬೆಳೆಗಳು ಹಾನಿಯಾಗಿವೆ. ಆದ್ದರಿಂದ ಸರ್ಕಾರ ಕೊಡಗಿನ ಎಲ್ಲಾ ಪ್ರದೇಶದಲ್ಲಿ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ತಾಲೂಕು ತಹಶೀಲ್ದಾರ್ ಮೂಲಕ ಸರಕಾರಕ್ಕೆ ಒತ್ತಡ ಹೇರುವ ನಿರ್ಧಾರವನ್ನು ರೈತ ಸಂಘದಿಂದ ಕೈಗೊಳ್ಳಲಾಗಿದೆ.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಅಧ್ಯಕ್ಷತೆಯಲ್ಲಿ ಕೇಂದ್ರ ಕಚೇರಿ ಗೋಣಿಕೊಪ್ಪಲುವಿನಲ್ಲಿ ಜಿಲ್ಲಾ ಪದಾಧಿಕಾರಿಗಳ ತುರ್ತು ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು. ಸಭೆಯಲ್ಲಿ ಹುದಿಕೇರಿ ಹೋಬಳಿ ಅಧ್ಯಕ್ಷ ಚಂಗುಲಂಡ ಸೂರಜ್, ಪೆÇನ್ನಂಪೇಟೆ ಹೋಬಳಿಯ ಅಧ್ಯಕ್ಷ ಆಲೇಮಾಡ ಮಂಜುನಾಥ್, ಮಾಯಮುಡಿ ಅಧ್ಯಕ್ಷ ಪುಚ್ಚಿಮಾಡ ರಾಯ್ ಮಾದಪ್ಪ, ಪದಾಧಿಕಾರಿಗಳಾದ ಚಂಗುಲಂಡ ಮಧು ತಮ್ಮಯ್ಯ ಸೇರಿದಂತೆ ಇನ್ನಿತರ ಪದಾಧಿಕಾರಿಗಳು ಹಾಜರಿದ್ದರು.