ಕೂಡಿಗೆ, ಸೆ. 5: ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಿವೆಯ ಶ್ರೀ ರಾಮಲಿಂಗೇಶ್ವರ ದೇವಾಲಯದ ಎದುರಿನ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ತೂಗುಸೇತುವೆ ದುರಸ್ತಿಗೆ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಸೂಚನೆ ನೀಡಿದ್ದಾರೆ. ಕಾವೇರಿ-ಹಾರಂಗಿ ನದಿ ಸಂಗಮದ ಸ್ಥಳದಿಂದ ಮುಂದೆ ಹರಿದು ಬರುವ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ತೂಗುಸೇತುವೆ ಕಂಬಗಳು ಕಳೆದ ಎರಡು ವರ್ಷಗಳಿಂದ ಕಾವೇರಿ ನದಿಯಲ್ಲಿ ಹೆಚ್ಚು ನೀರು ಬಂದ ಪರಿಣಾಮ ಹಾಳಾಗಿದ್ದವು. ಸರಿಪಡಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಕಾಮಗಾರಿಯ ಕ್ರಿಯಾ ಯೋಜನೆ ತಯಾರಿಸಿ ನಂತರ ದುರಸ್ತಿ ನಡೆಸಲು ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ರಂಜನ್ ತಿಳಿಸಿದ್ದಾರೆ.