ಸೋಮವಾರಪೇಟೆ, ಸೆ. 5: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಹೈನುಗಾರಿಕೆ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ರೈತರಿಂದ, 2020-21ನೇ ಸಾಲಿನ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ತಾಲೂಕು ಮಟ್ಟದ ಕೃಷಿ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಎಸ್.ಮುಕುಂದ ತಿಳಿಸಿದ್ದಾರೆ.
ಆಸಕ್ತಿಯುಳ್ಳ ಕೃಷಿಕರು ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ, ಆರ್.ಟಿ.ಸಿ., ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, ಬ್ಯಾಂಕ್ ಪಾಸ್‍ಬುಕ್ ಪ್ರತಿಯೊಂದಿಗೆ ಅರ್ಜಿಯನ್ನು ತಾ. 7ರ ಒಳಗೆ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ತಲುಪಿಸುವಂತೆ ತಿಳಿಸಿದ್ದಾರೆ.