ಮಡಿಕೇರಿ, ಸೆ. 5: 2020ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯು ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ತಾ. 7 ರಿಂದ 19 ರವರೆಗೆ ನಡೆಸಲು ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಕೋವಿಡ್ ಪಾಸಿಟಿವ್ ಇರುವ ವಿದ್ಯಾರ್ಥಿಗಳು ಕೂಡ ಈ ಪರೀಕ್ಷೆ ಬರೆಯುವ ಅವಕಾಶವನ್ನು ಇಲಾಖೆಯು ಕಲ್ಪಿಸಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪಿ.ಎಸ್. ಜಾನ್ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣವಿರುವ ವಿದ್ಯಾರ್ಥಿಗಳು ಇದ್ದಲ್ಲಿ/ಕಂಟೈನ್ಮೇಟ್ ಪ್ರದೇಶದಲ್ಲಿರುವ ವಿದ್ಯಾರ್ಥಿಗಳ ಮಾಹಿತಿಯನ್ನು ಮುಂಚಿತವಾಗಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಹಾಗೂ ತಮಗೆ ಪರೀಕ್ಷೆ ಬರೆಯಲು ನಿಗದಿಪಡಿಸಿರುವ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರುಗಳಿಗೆ ಒದಗಿಸಬೇಕಿದೆ. ಈ ವಿದ್ಯಾರ್ಥಿಗಳು ಸುಗಮವಾಗಿ ಪರೀಕ್ಷೆಯನ್ನು ಬರೆಯಲು ಸೂಕ್ತ ವ್ಯವಸ್ಥೆಯನ್ನು ಕೂಡ ಜಿಲ್ಲಾಡಳಿತವೂ ಮಾಡಿರುತ್ತದೆ. ಆದ ಕಾರಣ ಇಂತಹ ಪ್ರಕರಣಗಳ ಸಂಬಂಧ ಇಲಾಖೆಗೆ ಮುಂಚಿತವಾಗಿ ವಿದ್ಯಾರ್ಥಿಗಳ ಪೂರ್ಣ ವಿವರವನ್ನು ನೀಡಬೇಕಾಗಿರುತ್ತದೆ. ಕಚೇರಿಯ ಜಜಠಿue.mಚಿಜiಞeಡಿi@gmಚಿiಟ.ಛಿom ಈ ಮೇಲ್ ವಿಳಾಸಕ್ಕೆ ಸಲ್ಲಿಸುವುದು ಹಾಗೂ ಹೆಚ್ಚಿನ ವಿವರಗಳಿಗೆ ಮೊಬೈಲ್ ಸಂಖ್ಯೆ 9035366225 ಗೆ ಮಾಹಿತಿಯನ್ನು ನೀಡಲು ಸಂಬಂಧಿಸಿದ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪಿ.ಎಸ್. ಜಾನ್ ತಿಳಿಸಿದ್ದಾರೆ.