ಸಿದ್ದಾಪುರ, ಸೆ. 6: ಕಳತ್ಮಾಡ್ ಗ್ರಾಮದಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳ ಪೈಕಿ ಪುಂಡಾನೆಯೊಂದನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ ವೀರಾಜಪೇಟೆ ವಲಯ ಅರಣ್ಯ ವ್ಯಾಪ್ತಿಗೊಳಪಡುವ ಹೊಸಕೋಟೆ ಕಳತ್ಮಾಡು ಗ್ರಾಮದಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳ ಪೈಕಿ ಉಪಟಳ ನೀಡುತ್ತಿರುವ ಒಂಟಿ ಸಲಗವೊಂದನ್ನು ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಸಿಬ್ಬಂದಿಗಳು ಸಜ್ಜುಗೊಂಡಿದ್ದಾರೆ.

ತಾ.7ರಂದು (ಇಂದು) ಕಾರ್ಯಾಚರಣೆ ನಡೆಯಲಿದೆ. ವೀರಾಜಪೇಟೆ ಡಿಸಿಎಫ್ ಚಕ್ರಪಾಣಿ ನೇತೃತ್ವದಲ್ಲಿ ಎಸಿಎಫ್‍ಗಳಾದ ರೋಶಿನಿ, ಶ್ರೀಪತಿ, ಅರಣ್ಯಾಧಿಕಾರಿಗಳು, ಅರಣ್ಯ ಇಲಾಖೆಯ ಸಿಬ್ಬಂದಿಗಳು ಆರ್‍ಆರ್‍ಟಿ ತಂಡದ ಸಿಬ್ಬಂದಿ ಸೇರಿದಂತೆ 50 ಮಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ಸಂದರ್ಭದಲ್ಲಿ ಗ್ರಾಮಸ್ಥರು ಸಹಕರಿಸುವಂತೆ ಎಸಿಎಫ್ ರೋಶಿನಿ ಮನವಿ ಮಾಡಿದ್ದಾರೆ.