*ಪೆÇನ್ನಂಪೇಟೆ, ಸೆ. 6: ದೇಶದ ಕಾಫಿ ಉದ್ಯಮದ ಆರ್ಥಿಕತೆಗೆ ಬೆನ್ನೆಲುಬಾಗಿ ನಿರಂತರ ಕೊಡುಗೆ ನೀಡಿರುವ ಕೊಡಗಿನ ಕಾಫಿ ಬೆಳೆಗಾರರನ್ನು ನಿರ್ಲಕ್ಷಿಸುವ ಕೆಲವು ಅಧಿಕಾರಿಗಳ ಮನೋಸ್ಥಿತಿ ಖಂಡನಿಯ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಮೂಕೊಂಡ ವಿಜು ಸುಬ್ರಮಣಿ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿಗಳಿಗೆ ಬರೆದಿರುವ ಪತ್ರವನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಿದರು.

ಪ್ರಕೃತಿ ವಿಕೋಪದ ನಡುವೆ ಕಾಡಾನೆ ಸೇರಿದಂತೆ ವನ್ಯಪ್ರಾಣಿಗಳ ನಿರಂತರ ಹಾವಳಿ ಕೊಡಗಿನ ಕಾಫಿ ಮತ್ತು ಭತ್ತದ ಬೆಳೆಗಾರರನ್ನು ಹೈರಾಣಾಗಿಸಿದೆ. ಕಾಫಿ ಕೃಷಿಗೆ ಅಪಾರ ಪ್ರಮಾಣದ ಮಾನವ ಸಂಪನ್ಮೂಲ ಅಗತ್ಯವಿದ್ದು, ತೋಟಗಳಲ್ಲಿ ವರ್ಷದ ಎಲ್ಲಾ ಋತುಮಾನಗಳಲ್ಲೂ ಕೆಲಸವಿದ್ದೇ ಇರುತ್ತದೆ. ಕಾಫಿಯ ಬೆಲೆ ಅಂತರರಾಷ್ಟ್ರೀಯ ಮಾರುಕಟ್ಟೆಯನ್ನೇ ಸಂಪೂರ್ಣವಾಗಿ ಅವಲಂಬಿಸಿ ರುವುದರಿಂದ ಬೆಲೆಗಳಲ್ಲಿ ಉಂಟಾಗುವ ಏರುಪೇರಿನಿಂದ ಬೆಳೆಗಾರನಿಗೆ ಆರ್ಥಿಕ ಹೊಡೆತ ಬೀಳುತ್ತದೆ ಎಂದು ತಿಳಿಸಿದÀರು.

ಕಾಫಿ ಬೆಳೆಗಾರರ ಸಮಸ್ಯೆಯನ್ನು ಕಂದಾಯ ಮತ್ತು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಜಿಲ್ಲಾಧಿಕಾರಿಗಳು ಕೂಡ ಈ ಕುರಿತು ವಿಶೇಷ ಗಮನ ಹರಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ವಿಜು ಸುಬ್ರಮಣಿ ಮನವಿ ಮಾಡಿದ್ದಾರೆ.