ಮಡಿಕೇರಿ, ಸೆ. 6: ಕೊಡಗು ಜಿಲ್ಲೆಯಲ್ಲಿ ತಾ. 7 ರಿಂದ 19 ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ನಡೆಯಲಿದೆ. ಜಿಲ್ಲೆಯ 3 ತಾಲೂಕು ಕೇಂದ್ರಗಳಲ್ಲಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಹಾಗೂ ಪಾವಿತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳು ಸೇರಿದಂತೆ 200 ಮೀ. ಸುತ್ತಳತೆಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲು ಮತ್ತು ಜೆರಾಕ್ಸ್ ಹಾಗೂ ಕಂಪ್ಯೂಟರ್ ಅಂಗಡಿಗಳನ್ನು ಮುಚ್ಚಿಸಲು ಜಿಲ್ಲಾಡಳಿತ ಆದೇಶಿಸಿದೆ.ಮೇಲಿನ ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ ಕೊಡಗು ಜಿಲ್ಲೆಯಲ್ಲಿ ತಾ. 7 ರಿಂದ 19 ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರಡಿ ದತ್ತವಾದ ಅದಿsಕಾರದಂತೆ ಅನೀಸ್ ಕಣ್ಮಣಿ ಜಾಯ್ ಕೊಡಗು ಜಿಲ್ಲೆಯ ಜಿಲÁ್ಲದಿsಕಾರಿ ಹಾಗೂ ಜಿಲ್ಲಾ ದಂಡಾದಿsಕಾರಿ ಆದ ಅವರು ಕೆಳಕಂಡ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿರ್ಬಂಧಿತ ಸ್ಥಳ ಎಂದು ಘೋಷಿಸಿದ್ದಾರೆ.ಪರೀಕ್ಷಾ ಕೇಂದ್ರಗಳಾದ ಸರಕಾರಿ ಪದವಿ ಪೂರ್ವ ಕಾಲೇಜು ಮಡಿಕೇರಿ, ಸರಕಾರಿ ಪದವಿ ಪೂರ್ವ ಕಾಲೇಜು ವೀರಾಜಪೇಟೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಸೋಮವಾರಪೇಟೆಗೆ ಈ ಆದೇಶ ಅನ್ವಯಿಸಲಿದೆ. ಈ ಆದೇಶವು ಪರೀಕ್ಷಾ ದಿನಗಳಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಮಾತ್ರ ಚಾಲ್ತಿಯಲ್ಲಿರುತ್ತದೆ.
ಈ ಅವಧಿಯಲ್ಲಿ ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು (ಮೊದಲ ಪುಟದಿಂದ) ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು/ ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಿದೆ.
ಪರೀಕ್ಷಾ ಕೇಂದ್ರದೊಳಗೆ ಮುಖ್ಯ ಅಧೀಕ್ಷಕರು ಸಾಮಾನ್ಯ ಮೊಬೈಲ್ (ಃಚಿsiಛಿ ಒobiಟe) ಮಾತ್ರ ಇರಿಸಿ ಕೊಳ್ಳಬಹುದಾಗಿದ್ದು, ಉಳಿದಂತೆ ಎಲ್ಲಾ ಪರೀಕ್ಷಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್, ಸ್ಮಾರ್ಟ್ ವಾಚ್ ಮುಂತಾದ ಎಲೆಕ್ಟ್ರಾನಿಕ್ ಸಾಮಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ.
ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ. ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು / ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷೆ ಮುಗಿಯುವ ವರೆಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವು ದನ್ನು ಮತ್ತು ಸದರಿ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದೆ. ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ / ಮುಖಗವಸು ಧರಿಸುವುದು ಹಾಗೂ ಶುಚಿತ್ವ ಮತ್ತು ನೈರ್ಮಲ್ಯ ಕಾಪಾಡುವುದು.ಕೋವಿಡ್-19 ಸಂಬಂಧಿತ ಎಸ್.ಒ.ಪಿ.ಯನ್ನು ಕಡ್ಡಾಯವಾಗಿ ಪಾಲಿಸುವುದು ಅಗತ್ಯವೆಂದು ಆದೇಶಿಸಲಾಗಿದೆ.