ಕೂಡಿಗೆ, ಸೆ. 6: ರಾಜ್ಯದಲ್ಲಿ ಪ್ರಪ್ರಥಮವಾಗಿ ಪ್ರಾರಂಭಗೊಂಡಿದ ಕೂಡಿಗೆಯ ಕ್ರೀಡಾ ಪ್ರೌಢಶಾಲಾಗೆ ಕ್ರೀಡಾ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆ ರಾಜ್ಯಮಟ್ಟದಲ್ಲಿ ನಡೆದು ರಾಜ್ಯದಲ್ಲಿರುವ ವಿವಿಧ ಕ್ರೀಡಾ ಶಾಲೆ ವಿವಿಧ ವಿಭಾಗಕ್ಕೆ ಆಯ್ಕೆ ಮಾಡಲಾಗಿತ್ತು. ಅದರಂತೆ ಇಂದಿನಿಂದ ರಾಜ್ಯದ ವಿವಿಧ ಜಿಲ್ಲೆಯ ಆಯ್ಕೆಗೊಂಡ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ.

ಕೂಡಿಗೆ ಕ್ರೀಡಾ ಪ್ರೌಢಶಾಲೆಗೆ ರಾಜ್ಯಮಟ್ಟದ ಹಾಕಿ ಅಥ್ಲೆಟಿಕ್ಸ್ ಜಿಮ್ನಾಸ್ಟಿಕ್ ವಿಭಾಗಕ್ಕೆ ಆಯ್ಕೆ ಮಾಡಲಾಗಿದ್ದ ವಿದ್ಯಾರ್ಥಿಗಳ ಪ್ರವೇಶ ಮೂಲಕ ಶಾಲೆಗೆ ಸೇರ್ಪಡೆ ಮಾಡಲಾಗುತ್ತಿದೆ.

ರಾಜ್ಯ ಕ್ರೀಡಾ ಶಾಲೆಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ನಡೆಯುವ ರಾಜ್ಯದ ವಿವಿಧ ಕಡೆಗಳಲ್ಲಿ ಇರುವ ಶಾಲೆಗೆ 638 ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆದಿದೆ. ಇದರಲ್ಲಿ ಕೂಡಿಗೆಯ ಕ್ರೀಡಾ ಶಾಲೆಗೆ 64 ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದಾರೆ. ಇದರಲ್ಲಿ 8ನೇ ತರಗತಿಗೆ ಹಾಕಿ ವಿಭಾಗ ಸೇರಿದಂತೆ ಮೂರು ಕ್ರೀಡಾ ವಿಭಾಗಕ್ಕೆ ಕೊಡಗು ಸೇರಿದಂತೆ ಹಾಸನ, ಮೈಸೂರು, ಗುಲ್ಬರ್ಗಾ, ಹುಬ್ಬಳ್ಳಿ, ಚಿತ್ರದುರ್ಗ ಹಾಗೂ ಅನೇಕ ಜಿಲ್ಲೆಯ ವಿದ್ಯಾರ್ಥಿಗಳು ತಮ್ಮ ಪೆÇೀಷಕರೊಂದಿಗೆ ಶಾಲೆಗೆ ಬಂದು ಮಕ್ಕಳನ್ನು ಸೇರ್ಪಡೆ ಮಾಡುತ್ತಿದ್ದಾರೆ. ಈಗಾಗಲೇ ರಾಜ್ಯಮಟ್ಟದಲ್ಲಿ ಆಯ್ಕೆಗೊಂಡ ವಿದ್ಯಾರ್ಥಿಗಳು ತಮ್ಮ ಮೂಲ ದಾಖಲೆಗಳೊಂದಿಗೆ ಪ್ರವೇಶ ಪಡೆಯುತ್ತಿದ್ದಾರೆ ಎಂದು ಶಾಲೆಯ ಮುಖ್ಯೋಪಾಧ್ಯಾಯಿನಿ ಕುಂತಿ ಬೋಪಯ್ಯ ತಿಳಿಸಿದ್ದಾರೆ.