ಮಡಿಕೇರಿ, ಸೆ.6: ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದಂತೆ ಕೊಡಗು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ತಾ. 19 ರಂದು ವ್ಯಾಜ್ಯ ಪೂರ್ವ ಪ್ರಕರಣಗಳು ಮತ್ತು ನ್ಯಾಯಾಲಯದಲ್ಲಿ ಬಾಕಿಯಿರುವ ರಾಜಿಯಾಗುವಂತಹ ಎಲ್ಲಾ ಪ್ರಕರಣಗಳನ್ನು ತಾಂತ್ರಿಕ ಲೋಕ ಅದಾಲತ್(ಇ-ಲೋಕ ಅದಾಲತ್)ನ ಮೂಲಕ ಇತ್ಯರ್ಥ ಪಡಿಸಲಾಗುವುದು.
ಆಸಕ್ತರು ತಾ. 18 ರ ಮುಂಚಿತವಾಗಿ ತಮ್ಮ ವಕೀಲರನ್ನು ಸಂಪರ್ಕಿಸಿ ಪ್ರತಿ ದಿನ ನಡೆಯುವ ಲೋಕ ಅದಾಲತ್ನಲ್ಲಿ ಆಯಾಯ ನ್ಯಾಯಾಲಯಗಳಲ್ಲಿ ರಾಜಿ ಮಾಡಿಕೊಳ್ಳಬಹುದು. ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನೀಸ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ನ್ಯಾಯ ಸಂಯೋಗ, ಕಾನೂನು ನೆರವು ಘಟಕ ನ್ಯಾಯ ದೇಗುಲ, ಮೊದಲನೆ ಮಹಡಿ, ಎಚ್.ಸಿದ್ಧಯ್ಯ ರಸ್ತೆ, ಬೆಂಗಳೂರು-560027, ದೂ.ಸಂ: 080-22111730. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳು ಅಥವಾ ತಾಲ್ಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಯವರ ಸಹಾಯವಾಣಿ ಸಂಖ್ಯೆ : 1800-425-90900 ನ್ನು ಸಂಪರ್ಕಿಸಬಹುದು.